ಸ್ಪೀಕರ್ ಯು.ಟಿ ಖಾದರ್ ಸೇರಿ ಮೂವರಿಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್
ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಬುಧವಾರ ಜರುಗುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು

ಬೆಂಗಳೂರು: ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸೇರಿದಂತೆ ಮೂವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ನಿರ್ಧರಿಸಿದೆ.
ಅಕ್ಟೋಬರ್ 8 ರಂದು ನಡೆಯುವ ವಿವಿಯ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಯುಟಿ ಖಾದರ ಅವರ ಜೊತೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡ ಮತ್ತು ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.
ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಬುಧವಾರ ಜರುಗುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಬೆಂಗಳೂರು ವಿವಿ ಕುಲಪತಿ ಎಸ್.ಎಂ.ಜಯಕರ್ ಅವರು ತಿಳಿಸಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಭಾಗವಹಿಸುವ ಡಿ.ಆರ್.ಡಿ.ಎಲ್.ನ ನಿವೃತ್ತ ನಿರ್ದೇಶಕ, ಪದ್ಮಶ್ರೀ ಪುರಸ್ಕೃತ ಡಾ.ಪ್ರಹ್ಲಾದ ರಾಮರಾವ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಸಹ ಉಪಸ್ಥಿತರಿರುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



