ರಾಜ್ಯ

ರಾಜ್ಯದಲ್ಲಿ ದುಬಾರಿ ಶಿಕ್ಷಣ: SSLC ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ!

2025-26ನೇ ಸಾಲಿನ ಪರೀಕ್ಷಾ ಶುಲ್ಕವನ್ನು ಶೇ.5 ರಷ್ಟು ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ ದುಬಾರಿ ಶಿಕ್ಷಣ: SSLC ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ!
ಎಸ್ ಎಸ್ ಎಲ್ ಸಿ ಮಂಡಳಿ ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2025-26ನೇ ಸಾಲಿನ ಪರೀಕ್ಷಾ ಶುಲ್ಕವನ್ನು ಶೇ.5 ರಷ್ಟು ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಲಾಗಿದೆ. ಅದರನ್ವಯ 2025-26ನೇ ಸಾಲಿನಲ್ಲಿ ನಡೆಯಲಿರುವ ಎಲ್ಲಾ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇ.5 ರಷ್ಟು ಸೇರಿಸಿ ಶುಲ್ಕ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

2025-26ನೇ ಸಾಲಿನ SSLC ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಪರಿಷ್ಕೃತ ಪರೀಕ್ಷಾ ಶುಲ್ಕ ಇಂತಿದೆ..

ಪ್ರಥಮ ಬಾರಿ ಹಾಜರಾಗುವ SSLC ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ರೂ. 676 ರೂ. ನಿಂದ 710 ರೂ.ಗೆ ಹೆಚ್ಚಳ.

ಹೊಸದಾಗಿ ನೋಂದಣಿಯಾಗುವ ಖಾಸಗಿ ಅಭ್ಯರ್ಥಿಗಳ ನೋಂದಣಿ ಶುಲ್ಕ ಹಾಗೂ ಅರ್ಜಿ ಶುಲ್ಕ ರೂ. 236 ರಿಂದ ರೂ. 248 ಗೆ ಹೆಚ್ಚಳ.

ಈಗಾಗಲೇ ಖಾಸಗಿ ಅಭ್ಯರ್ಥಿಯಾಗಿ ನೋಂದಣಿಯಾಗಿ ಪರೀಕ್ಷಾ ಶುಲ್ಕ ಪಾವತಿಸಿದ ಅಭ್ಯರ್ಥಿಗಳ ನೋಂದಣಿ ನವೀಕರಣ ಶುಲ್ಕ ರೂ. 69 ರಿಂದ ರೂ. 72 ಗೆ ಹೆಚ್ಚಳ.

ಪುನರಾವರ್ತಿತ ಶಾಲಾ/ ಖಾಸಗಿ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ

  • ಒಂದು ವಿಷಯಕ್ಕೆ ರೂ. 427 ನಿಂದ ರೂ. 448 ಗೆ ಏರಿಕೆ ಮಾಡಲಾಗಿದೆ.

  • ಎರಡು ವಿಷಯಕ್ಕೆ ರೂ. 532 ರಿಂದ ರೂ. 559 ಗೆ ಹೆಚ್ಚಿಸಲಾಗಿದೆ.

  • ಮೂರು ಮತ್ತು ಮೂರಕ್ಕಿಂತ ಜಾಸ್ತಿ ವಿಷಯಗಳಿಗೆ ರೂ. 716 ರಿಂದ ರೂ. 752 ಗೆ ಹೆಚ್ಚಳ ಮಾಡಲಾಗಿದೆ.

Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.