ರಾಜ್ಯ

ಬೆಂಗಳೂರಿನಲ್ಲಿ 2 ಪ್ರತ್ಯೇಕ ರಸ್ತೆ ಅಪಘಾತ; ಇಬ್ಬರು ಆಟೋ ಚಾಲಕರು ಸಾವು

ಮೃತ ಚಾಲಕನನ್ನು ನೀಲಸಂದ್ರ ನಿವಾಸಿ ಸೈಯದ್ ಅಕ್ರಮ್ ಪಾಷಾ (50) ಎಂದು ಗುರ್ತಿಸಲಾಗಿದೆ.

ಬೆಂಗಳೂರಿನಲ್ಲಿ 2 ಪ್ರತ್ಯೇಕ ರಸ್ತೆ ಅಪಘಾತ; ಇಬ್ಬರು ಆಟೋ ಚಾಲಕರು ಸಾವು
ಸಂಗ್ರಹ ಚಿತ್ರ
Published On :

ಬೆಂಗಳೂರು: ಬೆಂಗಳೂರಿನಲ್ಲಿ ಶನಿವಾರ ರಾತ್ರಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ್ದಾರೆ.

ಅಶೋಕನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಆಸ್ಟಿನ್ ಟೌನ್ ಬಳಿ ನೀಲಸಂದ್ರದಿಂದ ಮದರ್ ತೆರೇಸಾ ರಸ್ತೆಯ ಕಡೆಗೆ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದಾಗ ಕಾರು ಡಿಕ್ಕಿಯಾಗಿ 50 ವರ್ಷದ ಆಟೋರಿಕ್ಷಾ ಚಾಲಕನೊಬ್ಬ ಸಾವನ್ನಪ್ಪಿದ್ದಾನೆ.

ಮೃತ ಚಾಲಕನನ್ನು ನೀಲಸಂದ್ರ ನಿವಾಸಿ ಸೈಯದ್ ಅಕ್ರಮ್ ಪಾಷಾ (50) ಎಂದು ಗುರ್ತಿಸಲಾಗಿದೆ. ಅಕ್ರಮ್ ಪಾಷಾ ಶನಿವಾರ ರಾತ್ರಿ ಪ್ರಯಾಣಿಕರನ್ನು ಕೂರಿಸಿಕೊಂಡು ಒಆರ್‌ಸಿ ರಸ್ತೆಯ ಚೌಟರಿ ಹಾಲ್ ಬಳಿ ಏಕಮುಖ ಸಂಚಾರದ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಆಟೊ ಚಲಾಯಿಸಿದ್ದಾರೆ.

ಈ ವೇಳೆ ನಿಯಂತ್ರಣ ಕಳೆದುಕೊಂಡ ಆಟೋ, ರಸ್ತೆ ಬದಿ ನಿಲುಗಡೆ ಮಾಡಿದ್ದ ಕಾರಿಗೆ ಡಿಕ್ಕಿ ಹೊಡೆದು, ನಂತರ ಎದುರಿನಿಂದ ಬರುತ್ತಿದ್ದ ಕ್ಯಾಬ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಆಟೊ ರಸ್ತೆಗೆ ಉರುಳಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಪಾಷಾ ಅವರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಪ್ರಯಾಣಿಕರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಅಶೋಕ ನಗರ ಸಂಚಾರ ಪೊಲೀಸರು ತೆರಳಿ ಪರಿಶೀಲಿನೆ ನಡೆಸಿ, ಆಟೊ ಹಾಗೂ ಕ್ಯಾಬ್ ಜಪ್ತಿ ಮಾಡಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಸರಸ್ವತಿಪುರಂ ನಿವಾಸಿ 62 ವರ್ಷದ ಆಟೋರಿಕ್ಷಾ ಚಾಲಕ ವೆಂಕಟರಾಮಯ್ಯ ಎಂಬುವವರು ಸಾವನ್ನಪ್ಪಿದ್ದಾರೆ.

ಆಟೊದಲ್ಲಿ ಮನೆ ಕಡೆಗೆ ಶನಿವಾರ ರಾತ್ರಿ ವೆಂಕಟರಾಮಯ್ಯ ತೆರಳುತ್ತಿದ್ದರು. ಈ ವೇಳೆ ಗೋವಿಂದರಾಜನಗರ ಪೊಲೀಸ್ ಠಾಣೆ ಹಿಂಭಾಗದ ರಸ್ತೆಯ 17ನೇ ಕ್ರಾಸ್ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಆಟೊ ಉರುಳಿ ಬಿದ್ದದೆ. ಪರಿಣಾಮ ವೆಂಕಟರಾಮಯ್ಯ ಅವರ ತಲೆಗೆ ಗಂಭೀರ ಪೆಟ್ಟಾಗಿ, ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ವೆಂಕಟರಾಮಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅವರು ಬದುಕುಳಿದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.