ರಾಜ್ಯ

ಏಯ್.. ನನ್ನ ನಿಲುವು ಏನೂ ಇಲ್ಲ.. ವಿರಕ್ತ ಮಠದ ಸ್ವಾಮೀಜಿಗಳ ನಿಲುವನ್ನೇ ಬರೆಸುತ್ತೇವೆ: ಸಚಿವ ತಂಗಡಗಿ ಮೇಲೆ ಸಿಎಂ ಗರಂ

ಪ್ರತ್ಯೇಕ ಧರ್ಮದ ಬಗ್ಗೆ ಮುನ್ನಲೆಯೂ ಇಲ್ಲ, ಹಿನ್ನೆಲೆಯೂ ಇಲ್ಲ, ಅದರಲ್ಲಿ ನನ್ನ ನಿಲುವು ಏನೂ ಇಲ್ಲ, ಕೆಲವು ವಿರಕ್ತ ಸ್ವಾಮೀಜಿಗಳು ಮಾತನಾಡುತ್ತಿದ್ದಾರೆ ಎಂದು ಕೊಪ್ಪಳದಲ್ಲಿ ನಿನ್ನೆ ಸಿದ್ದರಾಮಯ್ಯನವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ ಹೇಳಿದರು.

ಏಯ್.. ನನ್ನ ನಿಲುವು ಏನೂ ಇಲ್ಲ.. ವಿರಕ್ತ ಮಠದ ಸ್ವಾಮೀಜಿಗಳ ನಿಲುವನ್ನೇ ಬರೆಸುತ್ತೇವೆ: ಸಚಿವ ತಂಗಡಗಿ ಮೇಲೆ ಸಿಎಂ ಗರಂ
ಕೊಪ್ಪಳದಲ್ಲಿ ಕಾರ್ಯಕ್ರಮದಲ್ಲಿ ಸಿಎಂಗೆ ಸನ್ಮಾನ
Published On :

ಕೊಪ್ಪಳ: ಪ್ರತ್ಯೇಕ ಧರ್ಮದ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯನವರು ಸಚಿವ ಶಿವರಾಜ್ ತಂಗಡಗಿ ಮೇಲೆ ಕೋಪಗೊಂಡ ಪ್ರಸಂಗ ನಡೆದಿದೆ.

ಪ್ರತ್ಯೇಕ ಧರ್ಮದ ಬಗ್ಗೆ ಮುನ್ನಲೆಯೂ ಇಲ್ಲ, ಹಿನ್ನೆಲೆಯೂ ಇಲ್ಲ, ಅದರಲ್ಲಿ ನನ್ನ ನಿಲುವು ಏನೂ ಇಲ್ಲ, ಕೆಲವು ವಿರಕ್ತ ಸ್ವಾಮೀಜಿಗಳು ಮಾತನಾಡುತ್ತಿದ್ದಾರೆ ಎಂದು ಕೊಪ್ಪಳದಲ್ಲಿ ನಿನ್ನೆ ಸಿದ್ದರಾಮಯ್ಯನವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ ಹೇಳಿದರು.

ರಾಜ್ಯದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮ ಕೂಗು ವಿಚಾರ ಪ್ರಸ್ತಾಪವಾಗಿದೆ. ಈ ಬಗ್ಗೆ ನಿಮ್ಮ ನಿಲುವು ಏನು ಎಂದು ವರದಿಗಾರರು ಕೇಳಿದ ಪ್ರಶ್ನೆಯನ್ನು ಸಚಿವ ತಂಗಡಗಿ ಸಿಎಂಗೆ ಪುನರುಚ್ಛರಿಸಿದ್ದಾರೆ. ಈ ವೇಳೆ ಗರಂ ಆದ ಸಿಎಂ ಅದರಲ್ಲಿ ನನ್ನ ನಿಲುವೇನಿಲ್ಲ. ಪ್ರತ್ಯೇಕ ಧರ್ಮದ ಬಗ್ಗೆ ಮುನ್ನೆಲೆ ಇಲ್ಲ, ಹಿನ್ನೆಲೆಯೂ ಇಲ್ಲ. ಕೆಲವು ವಿರಕ್ತ ಸ್ವಾಮೀಜಿಗಳು ಅದರ ಬಗ್ಗೆ ಮಾತನಾಡುತ್ತಿದ್ದಾರೆ, ಅವರು ಏನು ಬರೆಸುತ್ತಾರೆ ಅದನ್ನು ನಾವು ಬರೆದುಕೊಳ್ಳುತ್ತೇವೆ ಎಂದಿದ್ದಾರೆ.

ಬಿಜೆಪಿಗೆ ಸಿದ್ದರಾಮಯ್ಯ ಸವಾಲ್​

ರಾಜ್ಯ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡುತ್ತಿದ್ದರೂ ವಿಪಕ್ಷಗಳು ನಮ್ಮ ಮೇಲೆ ಆರೋಪ ಮಾಡುತ್ತಿವೆ. ಗ್ಯಾರಂಟಿಗಳಿಂದ ಸರ್ಕಾರದ ಬಳಿ ದುಡ್ಡಿಲ್ಲದ ಕಾರಣ ಅಭಿವೃದ್ಧಿ ಕೆಲಸಗಳು ನಿಂತಿವೆ ಎಂದು ಆರೋಪಿಸುತ್ತಾರೆ. ಸರ್ಕಾರದ ಬಳಿ ದುಡ್ಡು ಇಲ್ಲದಿದ್ದರೆ ಕೊಪ್ಪಳದಲ್ಲಿಯೇ 2 ಸಾವಿರ ಕೋಟಿ ಮೌಲ್ಯದ ಅಭಿವೃದ್ಧಿ ಕೆಲಸಗಳನ್ನ ಮಾಡಲು ಆಗುತ್ತಿತ್ತಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷ ಕೋಟಿ ಕೊಟ್ಟಿದ್ದು, ಬಿಜೆಪಿಯವರು ಚರ್ಚೆಗೆ ಬರಲಿ. ನಾನು ಲೆಕ್ಕ ಕೊಡಲು ತಯಾರಿದ್ದೇನೆ. ನುಡಿದಂತೆ ನಡೆದ ಸರ್ಕಾರ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್​ ಸರ್ಕಾರ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.