BiggBoss Kannada: ಜಾಲಿವುಡ್ ಸ್ಟುಡಿಯೋಸ್ಗೆ ಬೀಗ; ಮನೆಯಿಂದ ಹೊರಬಂದ ಬಿಗ್‌ಬಾಸ್ ಸ್ಪರ್ಧಿಗಳು ಹೋಗಿದ್ದೇಲ್ಲಿಗೆ?
ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಶುರುವಾಗಿ ಒಂದು ವಾರವಷ್ಟೇ ಮುಗಿದು, ಎರಡನೇ ವಾರಕ್ಕೆ ಕಾಲಿಟ್ಟಿದ್ದು ಅಷ್ಟರಲ್ಲಾಗಲೇ ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿದೆ.

ಬೆಂಗಳೂರು: ಬಿಗ್‌ಬಾಸ್ ಕನ್ನಡ 12ನೇ ಆವೃತ್ತಿಯ ರಿಯಾಲಿಟಿ ಶೋಗೆ ದೊಡ್ಡ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಶುರುವಾಗಿ ಒಂದು ವಾರವಷ್ಟೇ ಮುಗಿದು, ಎರಡನೇ ವಾರಕ್ಕೆ ಕಾಲಿಟ್ಟಿದ್ದು ಅಷ್ಟರಲ್ಲಾಗಲೇ ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿದೆ.
ರಾಮನಗರ ತಹಶೀಲ್ದರ್ ತೇಜಸ್ವಿನಿ ಸಮ್ಮುಖದಲ್ಲಿ ಅಧಿಕಾರಿಗಳು ತೆರಳಿ ಬೀಗ ಹಾಕಿದ್ದಾರೆ. ಅಲ್ಲದೆ ಬಿಗ್ ಬಾಸ್ ಮನೆಯಿಂದ ಸ್ಪರ್ಧಿಗಳನ್ನು ಹೊರಗೆ ಕಳುಹಿಸಲು 7.30ರವರೆಗೆ ಸಮಯ ನೀಡಲಾಗಿತ್ತು. ಅದರಂತೆ ಬಿಗ್ ಬಾಸ್ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದು ಸದ್ಯಕ್ಕೆ ಶೋ ಸ್ಥಗಿತಗೊಳಿಸಲಾಗಿದೆ. ಸದ್ಯ ಬಿಗ್ ಬಾಸ್ ಸ್ಪರ್ಧಿಗಳನ್ನು ಬಿಡದಿಯಲ್ಲಿರುವ ಈಗಲ್ ಟನ್ ರೆಸಾರ್ಟ್ ಗೆ ಸ್ಥಳಾಂತರಿಸಲಾಗಿದೆ. ಇನ್ನು ಕಾನೂನು ಹೋರಾಟಕ್ಕೆ ಮಾನೇಜ್ಮೆಂಟ್ ಮುಂದಾಗಿದ್ದು ಕೋರ್ಟ್ ಆದೇಶದ ನಂತರ ಶೋ ಕುರಿತು ತೀರ್ಮಾನಿಸಲಾಗುತ್ತದೆ.
ಪರಿಸರ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ. ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಲಿರಲಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಇದೀಗ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಎಂಟರ್ಟೈನ್ಮೆಂಟ್ ಪ್ರೈವೆಟ್ ಲಿಮಿಡೆಟ್ ಕಂಪನಿಗೆ ಬೀಗ ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ 17 ಮಂದಿ ಸ್ಪರ್ಧಿಗಳಿದ್ದು ನೂರಾರು ತಂತ್ರಜ್ಞರು ಈ ರಿಯಾಲಿಟಿ ಶೋಗಾಗಿ ಕೆಲಸ ಮಾಡುತ್ತಿದ್ದಾರೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ನೋಟಿಸ್ ಅನ್ನು ಜಾಲಿವುಡ್ ಮಾನೇಜ್ಮೆಂಟ್ ಸ್ವೀಕರಿಸಿದೆ.

ಬಿಗ್ ಬಾಸ್ ಕನ್ನಡ ಕಾರ್ಯಕ್ರಮಕ್ಕೆ ವಿಘ್ನ: ತಕ್ಷಣವೇ 'ಸ್ಟುಡಿಯೋ' ಬಂದ್ ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


