ರಾಜ್ಯ

ಮಳೆ ಎಫೆಕ್ಟ್: ಉಳ್ಳಾಲದಲ್ಲಿ ಅಪಾರ್ಟ್'ಮೆಂಟ್ ತಡೆಗೋಡೆ ಕುಸಿತ, ಕೆಲಕಾಲ ಆತಂಕ ಸೃಷ್ಟಿ

ತಡೆಗೋಡೆ ಕುಸಿದ ಪರಿಣಾಮ ಮಕ್ಕಳು ಆಟವಾಡುತ್ತಿದ್ದ ಪ್ರದೇಶದ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ಮಳೆ ಎಫೆಕ್ಟ್: ಉಳ್ಳಾಲದಲ್ಲಿ ಅಪಾರ್ಟ್'ಮೆಂಟ್ ತಡೆಗೋಡೆ ಕುಸಿತ, ಕೆಲಕಾಲ ಆತಂಕ ಸೃಷ್ಟಿ
Published On :

ಬೆಂಗಳೂರು: ಸೋಮವಾರ ಮುಂಜಾನೆ ಸುರಿದ ಭಾರೀ ಮಳೆಯ ಪರಿಣಾಮ ಉಳ್ಳಾಲದಲ್ಲಿ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ಬಿದ್ದಿದ್ದು, ಪರಿಣಾಮ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ತಡೆಗೋಡೆ ಕುಸಿದ ಪರಿಣಾಮ ಮಕ್ಕಳು ಆಟವಾಡುತ್ತಿದ್ದ ಪ್ರದೇಶದ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಘಟನೆ ಬಳಿಕ ಅಪಾರ್ಟ್ಮೆಂಟ್ ಸಂಕೀರ್ಣಕ್ಕೆ ನೀರು ನುಗ್ಗಿದ್ದು, ಕಾರೊಂದು ಹಾನಿಗೊಳಗಾಗಿದೆ.

ಭಾನುವಾರ ಬೆಳಿಗ್ಗೆ 8.30 ರಿಂದ ಸೋಮವಾರ ಬೆಳಿಗ್ಗೆ 8.30 ರವರೆಗೆ 24 ಗಂಟೆಗಳ ಕಾಲ 6.8 ಮಿಮೀ ಮಳೆಯಾಗಿದ್ದು, ಹೆಬ್ಬಾಳದ ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಮಳೆಯಿಂದಾಗಿ ನಾಗವಾರ ಜಂಕ್ಷನ್‌ನಲ್ಲಿಯೂ ಮರದ ಕೊಂಬೆ ರಸ್ತೆಗೆ ಬಿದ್ದಿದ್ದರಿಂದ ಸಂಚಾರ ಸ್ತಬ್ಧಗೊಂಡು, ವಾಹನ ಸವಾರರು ಪರದಾಡುವತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ನಂತರ ಸಂಚಾರ ಪೊಲೀಸರು ಬದಲಿ ಮಾರ್ಗಗಳ ಬಳಸುವಂತೆ ಮನವಿ ಮಾಡಿದರು.

ಪೀಣ್ಯದಲ್ಲಿ ಸುರಿದ ಮಳೆಗೆ ಮರವೊಂದು ಉರುಳಿ ಬಿದ್ದ ಕಾರಣ, ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಸಂಚಾರ ಪೊಲೀಸರು ವಾಹನ ಸವಾರರು ಎನ್‌ಟಿಟಿಎಫ್ ರಸ್ತೆಯನ್ನು ಬಳಸುವಂತೆ ಸಲಹೆ ನೀಡಿದರು.

ಈ ನಡುವೆ ದುರ್ಬಲ ಮರಗಳು ಮತ್ತು ಕೊಂಬೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅರಣ್ಯ ವಿಭಾಗಕ್ಕೆ ನಿರ್ದೇಶನ ನೀಡುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.