ರಾಜ್ಯ

ತುಮಕೂರು: ಫೇಸ್‌ಬುಕ್ ಲೈವ್‌ನಲ್ಲಿ ಆತ್ಮಹತ್ಯೆಗೆ ಪತಿ ಯತ್ನ; ಇದೊಂದು ಡ್ರಾಮಾ ಎಂದ ಪತ್ನಿ

ಕಳೆದ ನಾಲ್ಕು ವರ್ಷಗಳ ಹಿಂದೆ ಸೈಯದ್ ನಿಕತ್ ಫರ್ದೋಸ್ ಎಂಬಾಕೆ ಜೊತೆ ಸಲ್ಮಾನ್ ಪಾಷಾ ವಿವಾಹ ನಡೆದಿತ್ತು. ಮದುವೆ ನಂತರ ಎರಡು ವರ್ಷ ಸುಖ ಸಂಸಾರವನ್ನೂ ನಡೆಸಿದ್ದರು.

ತುಮಕೂರು: ಫೇಸ್‌ಬುಕ್ ಲೈವ್‌ನಲ್ಲಿ ಆತ್ಮಹತ್ಯೆಗೆ ಪತಿ ಯತ್ನ; ಇದೊಂದು ಡ್ರಾಮಾ ಎಂದ ಪತ್ನಿ
ಸಲ್ಮಾನ್ ಪಾಷಾ ಮತ್ತು ಸೈಯ್ಯದ್ ನಿಖತ್
Published On :

ತುಮಕೂರು: ಫೇಸ್‌ಬುಕ್ ಲೈವ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಸಂಬಂಧಿಕರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಲ್ಮಾನ್ ಪಾಷಾ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ನಾಲ್ಕು ವರ್ಷಗಳ ಹಿಂದೆ ಸೈಯದ್ ನಿಕತ್ ಫರ್ದೋಸ್ ಎಂಬಾಕೆ ಜೊತೆ ಸಲ್ಮಾನ್ ಪಾಷಾ ವಿವಾಹ ನಡೆದಿತ್ತು. ಮದುವೆ ನಂತರ ಎರಡು ವರ್ಷ ಸುಖ ಸಂಸಾರವನ್ನೂ ನಡೆಸಿದ್ದರು.

ಪತ್ನಿ ಎರಡನೇ ಮಗುವಿನ ಗರ್ಭಿಣಿಯಾದಾಗ ಸಲ್ಮಾನ್​ ಗೆ ಕುವೈತ್​ ನಲ್ಲಿ ಹೈಡ್ರಾಲಿಕ್ ಮೆಕಾನಿಕ್ ಆಗಿ ಕೆಲಸ ಸಿಕ್ಕಿದೆ. ಹೀಗಾಗಿ ಆತ ವಿದೇಶಕ್ಕೆ ತೆರಳಿದ ಬಳಿಕ ಸೈಯದ್ ನಿಕತ್ ಫರ್ದೋಸ್ ತಾಯಿ ಮನೆಗೆ ತೆರಳಿದ್ದಾರೆ. ಆ ಬಳಿಕ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ.

AIMIM ಪಕ್ಷದ ತುಮಕೂರು ಜಿಲ್ಲಾಧ್ಯಕ್ಷನಾಗಿರುವ ಸೈಯದ್ ಬುರ್ಹಾನ್ ಉದ್ದೀನ್ ಜೊತೆ ಸೇರಿ ಪತ್ನಿ ಹೆಚ್ಚಿನ ಹಣಕ್ಕಾಗಿ ತನ್ನ ಪೀಡಿಸುತ್ತಿದ್ದಾಳೆ. ಜೊತೆಗೆ ಆಕೆಗೆ ಬುರ್ಹಾನ್ ಜೊತೆ ಅಕ್ರಮ ಸಂಬಂಧ ಇದ್ದು, ವಿದೇಶಿ ಕೆಲಸ ಬಿಟ್ಟು ತುಮಕೂರಿಗೆ ಬಂದರೂ ಇಬ್ಬರು ಮಕ್ಕಳನ್ನ ತೋರಿಸುತ್ತಿಲ್ಲ. ಹಣ ಕೊಡದಿದ್ದರೆ ವಿಚ್ಛೇದನ ನೀಡು ಎಂದು ಪತ್ನಿ ಹೇಳುತ್ತಿದ್ದು, ತುಮಕೂರು ಮಹಿಳಾ ಠಾಣೆ ಪೊಲೀಸರು ಸಹ ಹೆಂಡತಿ ಕುಟುಂಬಕ್ಕೆ ಬೆಂಬಲ ನೀಡುತ್ತಿದ್ದಾರೆ ಎನ್ನುವುದು ಸಲ್ಮಾನ್ ಪಾಷಾ ಆರೋಪ.

ಇನ್ನು ಗಂಡನ ಆರೋಪಗಳಿಗೆ ಪತ್ನಿ ಸೈಯದ್ ನಿಕತ್ ಫರ್ದೋಸ್ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆ ಸೋಪಿನ ನೀರು ಕುಡಿದು ಸಲ್ಮಾನ್​ ಡ್ರಾಮಾ ಮಾಡಿದ್ದ. ನಾನು ಕೆಲಸ ಮಾಡುವ ಜಾಗಕ್ಕೆ ಬಂದು ಆ್ಯಸಿಡ್ ಹಾಕುತ್ತೇನೆಂದು ಬೆದರಿಕೆ ಹಾಕಿದ್ದ. ಈ ಬಗ್ಗೆ ನಾನು ದೂರು ಸಹ ಕೊಟ್ಟಿದ್ದೆ ಎಂದು ಮರು ಆರೋಪ ಮಾಡಿದ್ದಾರೆ.

ನಾನು ಗರ್ಭಿಣಿಯಾಗಿದ್ದಾಗ ತನ್ನ ಅತ್ತೆಯೇ ಮನೆಯಿಂದ ಹೊರ ಹಾಕಿದರು. AIMIM ಜಿಲ್ಲಾಧ್ಯಕ್ಷ ಬುರ್ಹಾನ್ ನನ್ನ ಮಾವನಾಗಿದ್ದು, ಕಷ್ಟಗಳಿಗೆ ನೆರವಾಗಿದ್ದಾರೆ. ಮಾವ ಎಂದರೇ ತಂದೆ ಸಮಾನ. ಆದರೆ ಸಲ್ಮಾನ್​ ಅವರ ಜೊತೆಗೇ ಅಕ್ರಮ ಸಂಬಂಧದ ಆರೋಪ ಹೊರಿಸುತ್ತಿದ್ದಾರೆ. ಮಕ್ಕಳನ್ನು ನೋಡಲು ಬಾರದ ಪತಿ, ಈಗ ನಾಟಕ ಮಾಡುತ್ತಿದ್ದಾರೆ ಎಂದು ಸೈಯದ್ ನಿಕತ್ ಫರ್ದೋಸ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.