ರಾಜ್ಯ

RSS ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ. ನರಹರಿ ನಿಧನ

ಅವರ ನಿಧನಕ್ಕೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೃ ನರಹರಿ ಅವರು ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ಜೈಲುವಾಸವನ್ನೂ ಅನುಭವಿಸಿದ್ದರು.

RSS ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ. ನರಹರಿ ನಿಧನ
ಪ್ರೊ.ನರಹರಿ
Published On :

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ, ಮಾಜಿ ವಿಧಾನ ಪರಿಷತ್‌ ಸದಸ್ಯ ಪ್ರೊ. ಕೃ. ನರಹರಿ ತಮ್ಮ 93ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಇಂದು ಬೆಳಗ್ಗೆ 4.30ಕ್ಕೆ ಕೃ. ನರಹರಿ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೃ ನರಹರಿ ಅವರು ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ಜೈಲುವಾಸವನ್ನೂ ಅನುಭವಿಸಿದ್ದರು.

ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹಕರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕೃ. ನರಹರಿ ಕಾರ್ಯನಿರ್ವಹಿಸಿದ್ದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ, ವಿಧಾನ ಪರಿಷತ್ ಮಾಜಿ ಸದಸ್ಯ ಕೃ.ನರಹರಿ ಅವರ ನಿಧನದ ಸುದ್ದಿ ಕೇಳಿ ಹೃದಯ ಭಾರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.