ರಾಜ್ಯ

ಮುಡಾ ಪ್ರಕರಣ: ತನಿಖಾಧಿಕಾರಿ ಬದಲಾವಣೆ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್

ಮುಡಾ ಪ್ರಕರಣದ ತನಿಖಾಧಿಕಾರಿಯಾಗಿರುವ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಉದೇಶ್‌ ಅವರನ್ನು ಬದಲಾವಣೆ ಮಾಡಿ, ಬೇರೆ ಅಧಿಕಾರಿ ನೇಮಿಸುವಂತೆ ಲೋಕಾಯುಕ್ತರಿಗೆ ನಿರ್ದೇಶಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಮುಡಾ ಪ್ರಕರಣ: ತನಿಖಾಧಿಕಾರಿ ಬದಲಾವಣೆ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್
ಮುಡಾ ಕಚೇರಿ
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಕೋರ್ಟ್ ವಜಾಗೊಳಿಸಿದೆ.

ಮುಡಾ ಪ್ರಕರಣದ ತನಿಖಾಧಿಕಾರಿಯಾಗಿರುವ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಉದೇಶ್‌ ಅವರನ್ನು ಬದಲಾವಣೆ ಮಾಡಿ, ಬೇರೆ ಅಧಿಕಾರಿ ನೇಮಿಸುವಂತೆ ಲೋಕಾಯುಕ್ತರಿಗೆ ನಿರ್ದೇಶಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರು ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಸ್ನೇಹಮಯಿ ಕೃಷ್ಣ ವಿನಂತಿಯನ್ನು ತಿರಸ್ಕರಿಸಿತು ಮತ್ತು ಬದಲಾಗಿ ನಡೆಯುತ್ತಿರುವ ತನಿಖೆಯನ್ನು "ಸಾಧ್ಯವಾದಷ್ಟು ಬೇಗ" ಮತ್ತು ಗರಿಷ್ಠ ಎರಡು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಲು ಲೋಕಾಯುಕ್ತರಿಗೆ ನಿರ್ದೇಶಿಸಿದೆ.

ಸಮಗ್ರ ವರದಿಯನ್ನು ಸಲ್ಲಿಸಲು ಹೆಚ್ಚಿನ ಸಮಯ ವಿಸ್ತರಿಸಲಾಗುವುದಿಲ್ಲ ಎಂದು ಆದೇಶದಲ್ಲಿ ನಿರ್ದಿಷ್ಟವಾಗಿ ಹೇಳಿ, ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಿದೆ.

ಇನ್ನು ಲೋಕಾಯುಕ್ತ ‘ಬಿ’ ರಿಪೋರ್ಟ್ ಪ್ರಶ್ನಿಸಿರುವುದಕ್ಕೆ ಕೋರ್ಟ್ ಯಾವುದೇ ಆದೇಶ ನೀಡಿಲ್ಲ. ತನಿಖೆ ಪೂರ್ಣಗೊಂಡ‌ ಬಳಿಕವೇ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಮಾಡುವುದಾಗಿ ಕೋರ್ಟ್ ತಿಳಿಸಿದೆ. ಹೀಗಾಗಿ ಎರಡು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.