ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಶೀಘ್ರದಲ್ಲೇ ಸೌರ ವಿದ್ಯುತ್ ಸ್ಥಾವರ ಸ್ಥಾಪನೆ..!
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 1 ಮೆಗಾವ್ಯಾಟ್ ಕ್ಯಾಪ್ಟಿವ್ ಸೌರ ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲಾಗುತ್ತಿದ್ದು, ಇಲ್ಲಿ ಉತ್ಪಾದಿಸಿದ ವಿದ್ಯುತ್'ನ್ನು ಉದ್ಯಾನವನವನ್ನು ನಿರ್ವಹಿಸಲು ಬಳಸಲಾಗುವುದು.

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 1 ಮೆಗಾವ್ಯಾಟ್ ಕ್ಯಾಪ್ಟಿವ್ ಸೌರ ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲಾಗುತ್ತಿದ್ದು, ಇಲ್ಲಿ ಉತ್ಪಾದಿಸಿದ ವಿದ್ಯುತ್'ನ್ನು ಉದ್ಯಾನವನವನ್ನು ನಿರ್ವಹಿಸಲು ಬಳಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಅವರು ಬುಧವಾರ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಉಪಸ್ಥಿತಿಯಲ್ಲಿ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ 2024ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮಾನವ-ಪ್ರಾಣಿ ಸಂಘರ್ಷವನ್ನು ಕಡಿಮೆ ಮಾಡಲು ಮತ್ತು ಜಾಗೃತಿ-ಸಹಬಾಳ್ವೆಯ ಅಗತ್ಯವನ್ನು ಹೆಚ್ಚಿಸಲು ಪ್ರಯತ್ನಗಳು ನಡೆಯುತ್ತಿವೆ, ಅತಿಕ್ರಮಣಗೊಂಡ ಭೂಮಿಯನ್ನು ಮರಳಿ ಪಡೆಯಲು, ಹಸಿರು ಹೊದಿಕೆಯನ್ನು ಹೆಚ್ಚಿಸಲು ಮತ್ತು ಅರಣ್ಯೀಕರಣವನ್ನು ವೇಗಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.
ಇದೇ ವೇಳೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 1 ಮೆಗಾವ್ಯಾಟ್ ಕ್ಯಾಪ್ಟಿವ್ ಸೌರ ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲಾಗುತ್ತಿದ್ದು, ಇಲ್ಲಿ ಉತ್ಪಾದಿಸಿದ ವಿದ್ಯುತ್'ನ್ನು ಉದ್ಯಾನವನವನ್ನು ನಿರ್ವಹಿಸಲು ಬಳಸಲಾಗುವುದು. ಉದ್ಯಾನದ ಇಂದಿನ ಮತ್ತು ಭವಿಷ್ಯದ ಇಂಧನ ಅಗತ್ಯವನ್ನು ಸೌರ ವಿದ್ಯುತ್ ನಿಂದಲೇ ಪೂರೈಸಲು ತೀರ್ಮಾನಿಸಲಾಗಿದೆ. ದೇಶದಲ್ಲೇ ಪ್ರಥಮ ಪರಿಸರ ಸ್ನೇಹಿ ವಿದ್ಯುತ್ ಸೌಲಭ್ಯದ ಜೈವಿಕ ಉದ್ಯಾನಕ್ಕೆ ಮುಂದಿನ ವಾರ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಸೌರ ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಮಾತನಾಡಿದ ಬನ್ನೇರುಘಟ್ಟ ಜೈವಿಕ ಉದ್ಯಾನವನ ಅಧಿಕಾರಿಯೊಬ್ಬರು, ಉದ್ಯಾನವನದಲ್ಲಿ ವಾರ್ಷಿಕವಾಗಿ ವಿದ್ಯುತ್ ಬಿಲ್‌ಗಳಿಗಾಗಿ 35-40 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗುತ್ತಿದ್ದು, ಸುಮಾರು 600 ಕಿ.ವ್ಯಾಟ್ ವಿದ್ಯುತ್ ಬಳಸಲಾಗುತ್ತಿರುವುದರಿಂದ ಇದು ಅಗತ್ಯವಾಗಿತ್ತು. 1 ಮೆಗಾವ್ಯಾಟ್‌ಗಿಂತ ಕಡಿಮೆ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರವನ್ನು ಮೃಗಾಲಯದ ಬಳಕೆಯಾಗದ ಪ್ರದೇಶದಲ್ಲಿ ಕಲ್ಲಿನ ಮೇಲೆ ಸ್ಥಾಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇಂಧನ ಸ್ವಾವಲಂಬನೆಯನ್ನು ಬೆಳೆಸುವುದು ಮತ್ತು ಹೆಚ್ಚುವರಿ ವಿದ್ಯುತ್ ಮಾರಾಟ ಮಾಡುವುದು ಇದರ ಉದ್ದೇಶವಾಗಿದೆ. ಇದನ್ನು ಸಿಎಸ್‌ಆರ್ ನಿಧಿಯೊಂದಿಗೆ ಸ್ಥಾಪಿಸಲಾಗುತ್ತಿದೆ. ಪವರ್ ಗ್ರಿಡ್ ಮತ್ತು ನೆಟ್ ಮೀಟರಿಂಗ್ ಸ್ಥಾಪಿಸುವ ಕುರಿತು ಬೆಸ್ಕಾಂನೊಂದಿಗೆ ಶೀಘ್ರದಲ್ಲೇ ಚರ್ಚೆಗಳು ನಡೆಯಲಿದ್ದು, ಮಾರ್ಚ್ 2026 ರಿಂದ ಸೌರ ವಿದ್ಯುತ್ ಸ್ಥಾಪನೆ ಕಾರ್ಯಾಚರಣೆ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ಯೋಜನಾ ವೆಚ್ಚ ಸುಮಾರು 3.5 ಕೋಟಿ ರೂ.ಗಳೆಂದು ಅಂದಾಜಿಸಿದೆ. ವಿದ್ಯುತ್ ಕೆಲಸ, ಉಪಕೇಂದ್ರಗಳು ಮತ್ತು ಕೇಬಲ್‌ಗಳಿಗಾಗಿ ಹೆಚ್ಚುವರಿ 1 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



