ರಾಜ್ಯ

Chamarajpet: ಚಾಲಕನ ನಿಯಂತ್ರಣ ತಪ್ಪಿದ ಟ್ರಕ್‌ ಪೆಟ್ರೋಲ್ ಬಂಕ್ ಗೆ ಢಿಕ್ಕಿ; Video

ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿರುವ ನಯಾರಾ ಪೆಟ್ರೋಲ್ ಬಂಕ್ ನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

Chamarajpet: ಚಾಲಕನ ನಿಯಂತ್ರಣ ತಪ್ಪಿದ ಟ್ರಕ್‌ ಪೆಟ್ರೋಲ್ ಬಂಕ್ ಗೆ ಢಿಕ್ಕಿ; Video
ಪೆಟ್ರೋಲ್ ಬಂಕ್ ಗೆ ನುಗ್ಗಿದ ಟ್ರಕ್
Published On :

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ವೊಂದು ಬೆಂಗಳೂರಿನ ಚಾಮರಾಜಪೇಟೆಯ ಪೆಟ್ರೋಲ್ ಬಂಕ್‌ಗೆ ನುಗ್ಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿರುವ ನಯಾರಾ ಪೆಟ್ರೋಲ್ ಬಂಕ್ ನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಮೂಲಗಳ ಪ್ರಕಾರ ಶ್ರೀರಂಗಪಟ್ಟಣದಿಂದ ಕೆಆರ್ ಮಾರ್ಕೆಟ್​ಗೆ ಅಡುಗೆ ಎಣ್ಣೆ ಕೊಂಡೊಯ್ಯುತ್ತಿದ್ದ ಕಂಟೇನರ್ ಟ್ರಕ್ ಬ್ರೇಕ್ ಫೇಲ್ ಆಗಿ ಏಕಾಏಕಿ ಪೆಟ್ರೋಲ್ ಬಂಕ್​ಗೆ ನುಗ್ಗಿದೆ.

ಕಂಟೇನರ್ ನುಗ್ಗಿದ ರಭಸಕ್ಕೆ ಪೆಟ್ರೋಲ್ ಬಂಕ್ ಒಳಗಿದ್ದ ಅಂಗಡಿ ಜಖಂಗೊಂಡಿದೆ. ಅಂಗಡಿ ಒಳಗಿದ್ದ ಸಿಬ್ಬಂದಿ ಹಾಗೂ ಕಂಟೈನರ್ ಚಾಲಕನ ಕೈಗೆ ಗಾಯಗಳಾಗಿವೆ.

ಘಟನೆ ಸಂದರ್ಭ ಅನೇಕ ಗ್ರಾಹಕರು ಬೈಕ್ ಹಾಗೂ ಇತರ ವಾಹನಗಳಿಗೆ ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದರು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಘಟನೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಚಾಮರಾಜಪೇಟೆ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಆಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.