ಪ್ರಿಯಾಂಕ್ ಖರ್ಗೆ ಪತ್ರ ಬರೆದಿರೋದು ನನಗೆ ಗೊತ್ತಿಲ್ಲ; RSS ನಿಷೇಧದ ಬಗ್ಗೆ ಗೃಹ ಇಲಾಖೆಗೆ ಪ್ರಸ್ತಾವನೆ ಬಂದರೆ ಪರಿಶೀಲನೆ: ಪರಮೇಶ್ವರ್
ಪ್ರಿಯಾಂಕ್ ಪತ್ರ ಬರೆದಿರೋದು ಎಲ್ಲವೂ ನಿಮಗೆ ಗೊತ್ತಿದೆಯಲ್ಲ. ನೀವೇ ಹೇಳಿದಂತೆ ಅವರು ಪತ್ರ ಬರೆದಿದ್ದಾರೆ. ಶಾಲೆ, ಸರ್ಕಾರಿ ಜಾಗದಲ್ಲಿ ಬೇಡ ಅಂತ ಹೇಳಿದ್ದಾರೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ.

ಬೆಂಗಳೂರು: ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಕಾರ್ಯಕ್ರಮಗಳನ್ನ ನಿಷೇಧ ಮಾಡಬೇಕು ಎಂದು ಸಿಎಂಗೆ ಪತ್ರ ಬರೆದಿರೋದು ನನಗೇನು ಗೊತ್ತಿಲ್ಲ. ಆದರೆ ಗೃಹ ಇಲಾಖೆಗೆ ಆ ಪತ್ರ ಬಂದರೆ ಪರಿಶೀಲನೆ ಮಾಡುತ್ತೇವೆ ಎಂಬುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಪತ್ರ ಬರೆದಿರೋದು ಎಲ್ಲವೂ ನಿಮಗೆ ಗೊತ್ತಿದೆಯಲ್ಲ. ನೀವೇ ಹೇಳಿದಂತೆ ಅವರು ಪತ್ರ ಬರೆದಿದ್ದಾರೆ. ಶಾಲೆ, ಸರ್ಕಾರಿ ಜಾಗದಲ್ಲಿ ಬೇಡ ಅಂತ ಹೇಳಿದ್ದಾರೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ.
ಸಿಎಂ ಅವರು ಅದರ ಬಗ್ಗೆ ಚರ್ಚೆ ಮಾಡ್ತಾರೇನೋ, ಸಿಎಸ್ ಅವರು ನಿರ್ಧಾರ ತೆಗೆದುಕೊಳ್ತಾರೆ ಎಂದು ವಿವರಿಸಿದರು.
ಈ ಬಗ್ಗೆ ನಮ್ಮ ಇಲಾಖೆಗೆ ಬಂದರೆ ಪರಿಶೀಲನೆ ಮಾಡ್ತೇವೆ. ಅದರ ಸಾಧಕ ಬಾಧಕದ ಬಗ್ಗೆ ಚರ್ಚಿಸುತ್ತೇವೆ. ದೂರು ಬಂದರೆ ಮಾಡಬಹುದು. ವೈಯುಕ್ತಿಕವಾಗಿ ನನ್ನ ಅಭಿಪ್ರಾಯ ಯಾಕೆ ಹೇಳಬೇಕು? ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



