RSS ಚುಟುವಟಿಕೆ ನಿರ್ಬಂಧಕ್ಕೆ ಪತ್ರ: ಫೋನ್ ರಿಂಗಣಿಸುವುದು ನಿಂತಿಲ್ಲ, ಬೆದರಿಕೆ ಕರೆ ಬರುತ್ತಿವೆ; ಪ್ರಿಯಾಂಕ್ ಖರ್ಗೆ
ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಪ್ರಶ್ನಿಸಲು ಮತ್ತು ತಡೆಯಲು ನಾನು ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು, ಅತ್ಯಂತ ಕೆಟ್ಟ ನಿಂದನೆಗಳಿಂದ ತುಂಬಿಹೋಗಿವೆ.

ಬೆಂಗಳೂರು: ಸರ್ಕಾರಿ ಶಾಲೆ, ಕಾಲೇಜು ಹಾಗೂ ಇನ್ನಿತರ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಬೆನ್ನಲ್ಲೇ ನನ್ನ ಫೋನ್ ರಿಂಗಣಿಸುವುದು ನಿಲ್ಲಿಸಿಲ್ಲ. ಬೆದರಿಕೆ ಕರೆಗಳು ಬರುತ್ತಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಮಂಗಳವಾರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಪ್ರಶ್ನಿಸಲು ಮತ್ತು ತಡೆಯಲು ನಾನು ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು, ಅತ್ಯಂತ ಕೆಟ್ಟ ನಿಂದನೆಗಳಿಂದ ತುಂಬಿಹೋಗಿವೆ. ಆದರೆ,. ನಾನು ಇದರಿಂದ ವಿಚಲಿತನಾಗುವುದಿಲ್ಲ ಅಥವಾ ಆಶ್ಚರ್ಯಪಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಮಹಾತ್ಮ ಗಾಂಧಿ ಅಥವಾ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದ ಆರ್‌ಎಸ್‌ಎಸ್, ನನ್ನನ್ನೇಕೆ ಬಿಡುತ್ತಾರೆ? ಬೆದರಿಕೆಗಳು ಮತ್ತು ವೈಯಕ್ತಿಕ ನಿಂದನೆಗಳು ನನ್ನನ್ನು ಮೌನಗೊಳಿಸುತ್ತವೆ ಎಂದು ಅವರು ಭಾವಿಸಿದರೆ, ಅದು ಅವರ ತಪ್ಪು ಭಾವನೆ. ಇದು ಕೇವಲ ಆರಂಭವಷ್ಟೇ ಎಂದು ಹೇಳಿದ್ದಾರೆ.
ಬುದ್ಧ, ಬಸವಣ್ಣ ಮತ್ತು ಬಾಬಾಸಾಹೇಬ್ ಅವರ ತತ್ವಗಳ ಮೇಲೆ ಸ್ಥಾಪಿತವಾದ ಸಮಾಜವನ್ನು ನಿರ್ಮಿಸಲು ಇದು ಸೂಕ್ತ ಸಮಯ. ಸಮಾನತೆ, ವಿವೇಚನೆ ಮತ್ತು ಕರುಣೆಯಲ್ಲಿ ಬೇರೂರಿರುವ ಸಮಾಜ ಕಟ್ಟಬೇಕಿದೆ. ಈ ದೇಶವನ್ನು ಅತ್ಯಂತ ಅಪಾಯಕಾರಿ ವೈರಸ್‌ಗಳಿಂದ ಶುದ್ಧೀಕರಿಸಬೇಕಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


