ಕಲಬುರಗಿ: 3 ತಿಂಗಳಿಂದ ಸಿಗದ ವೇತನ; ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆ
ಡೆತ್ ನೋಟ್ನಲ್ಲಿ ಪಿಡಿಓ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಉಲ್ಲೇಖಿಸಿ ಮಳಖೇಡ ಗ್ರಾಮ ಪಂಚಾಯತಿಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಂದು ತಿಳಿಸಿದ್ದಾರೆ

ಕಲಬುರಗಿ: 3 ತಿಂಗಳಿಂದ ಸಂಬಳ ಸಿಗದಿದ್ದಕ್ಕೆ ಬೇಸರಗೊಂಡ ಗ್ರಂಥಾಲಯ ಮೇಲ್ವಿಚಾರಕಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಭಾಗ್ಯಶ್ರಿ (45) ಎಂದು ಗುರುತಿಸಲಾಗಿದ್ದು, ಅವರು ಮಳಖೇಡ ಸರ್ಕಾರಿ ಗ್ರಂಥಾಲಯದಲ್ಲಿ ಮೇಲ್ವಿಚಾರಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ಪಾಂಡುಸಿಂಗ್ ಚವ್ಹಾಣ್ ಅವರ ಹೇಳಿಕೆಯ ಪ್ರಕಾರ, ‘ಮೂರು ತಿಂಗಳಿಂದ ವೇತನ ಪಾವತಿ ಆಗಿರಲಿಲ್ಲ.
ಅಧಿಕಾರಿಗಳು ಸತಾಯಿಸುತ್ತಿದ್ದರು. ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಪತ್ರ ಬರೆದಿಟ್ಟಿದ್ದಾರೆ. ಡೆತ್ ನೋಟ್ನಲ್ಲಿ ಪಿಡಿಓ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಉಲ್ಲೇಖಿಸಿ ಮಳಖೇಡ ಗ್ರಾಮ ಪಂಚಾಯತಿಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು “ಸೇಡಂ ಶಾಸಕ ಡಾ. ಶರಣಪ್ರಕಾಶ ಪಾಟೀಲ್ ಸ್ಥಳಕ್ಕೆ ಬರುವವರೆಗೂ ಮೃತದೇಹವನ್ನು ಹೊರತೆಗೆಯುವುದಿಲ್ಲ” ಎಂದು ಪಟ್ಟು ಹಿಡಿದು ಗ್ರಂಥಾಲಯದ ಎದುರು ಪ್ರತಿಭಟನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


