ಶಾಸಕ ಕೆ.ವೈ ನಂಜೇಗೌಡ ಆಯ್ಕೆಗೆ ತಡೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ; ಮರುಮತ ಎಣಿಕೆಗೆ ಸೂಚನೆ
ಹೈಕೋರ್ಟ್ ಶಾಸಕ ಸ್ಥಾನ ರದ್ದು ಮಾಡಿದ್ದನ್ನು ಪ್ರಶ್ನೆ ಮಾಡಿ ಕೆವೈ ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ನ ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಜೊಯಮಲ್ಯ ಬಾಗ್ಚಿ ಅವರ ಪೀಠದಿಂದ ವಿಚಾರಣೆ ನಡೆಸಲಾಯಿತು.

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಹೈಕೋರ್ಟ್ ಕೊಟ್ಟಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದು, ಮರುಮತ ಎಣಿಕೆ ಮಾಡಲು ಮಹತ್ವದ ಸೂಚನೆ ನೀಡಿದ್ದು ನಂಜೇಗೌಡರಿಗೆ ತುಸು ಸಮಾಧಾನ ತಂದಿದೆ.
ಹೈಕೋರ್ಟ್ ಶಾಸಕ ಸ್ಥಾನ ರದ್ದು ಮಾಡಿದ್ದನ್ನು ಪ್ರಶ್ನೆ ಮಾಡಿ ಕೆವೈ ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ನ ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಜೊಯಮಲ್ಯ ಬಾಗ್ಚಿ ಅವರ ಪೀಠದಿಂದ ವಿಚಾರಣೆ ನಡೆಸಲಾಯಿತು. ಈ ವೇಳೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
2023 ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದ ಮತ ಎಣಿಕೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಪ್ಟೆಂಬರ್ 16 ರಂದು ಕರ್ನಾಟಕ ಹೈಕೋರ್ಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆವೈ ನಂಜೇಗೌಡ ಆಯ್ಕೆಯನ್ನು ರದ್ದುಪಡಿಸಿತ್ತು. ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ನಂಜೇಗೌಡರಿಗೆ ಒಂದು ತಿಂಗಳ ಅವಕಾಶ ನೀಡಿತ್ತು. ಹೀಗಾಗಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
4 ವಾರದಲ್ಲಿ ಮರು ಎಣಿಕೆಗೆ ಸೂಚನೆ
ಮರು ಮತ ಎಣಿಕೆಗೆ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಪ್ರಕಟ ಮಾಡದೇ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ಸುಪ್ರೀಂ ಕೋರ್ಟ್ ಸೂಚನೆ ಕೊಟ್ಟಿದೆ. ನ್ಯಾಯಾಲಯದ ಅನುಮತಿಯಿಲ್ಲದೆ ಫಲಿತಾಂಶ ಘೋಷಿಸುವಂತಿಲ್ಲ.
ಸದ್ಯಕ್ಕೆ ನಂಜೇಗೌಡ ಸ್ಥಾನ ಅಬಾಧಿತ
ಮರು ಎಣಿಕೆ ನಡೆಸಿ ಅದರ ಫಲಿತಾಂಶ ಬರುವವರೆಗೂ ನಂಜೇಗೌಡ ಅವರು ಶಾಸಕ ಸ್ಥಾನ ಅಬಾಧಿತ ಎಂದು ಕೋರ್ಟ್ ಹೇಳಿದೆ. ಪ್ರಕರಣದ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



