ರಸ್ತೆಯಲ್ಲೇ ಬೈಕ್ ಸವಾರನಿಗೆ ಬೆಂಗಳೂರು ಸಂಚಾರಿ ಪೊಲೀಸ್ ಕಪಾಳಮೋಕ್ಷ; Video Viral
ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ತಡೆದಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಬೈಕ್ ಸವಾರನಿಗೆ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಪಾಳ ಮೋಕ್ಷ ಮಾಡಿರುವ ವಿಡಿಯೊವೊಂದು ವ್ಯಾಪಕ ವೈರಲ್ ಆಗುತ್ತಿದೆ.
ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ತಡೆದಿದ್ದಾರೆ. ಈ ವೇಳೆ ದಾಖಲೆ ಪರಿಶೀಲನೆ ಮಾಡುವಾಗ ಅಧಿಕಾರಿ ಮತ್ತು ಬೈಕ್ ಸವಾರನ ನಡುವೆ ಬಿಸಿ ವಾಗ್ವಾದ ನಡೆದಿದೆ.
ಈ ವೇಳೆ ನೋಡ ನೋಡುತ್ತಲೇ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೈಕ್ ಸವಾರನೆ ಕೆನ್ನೆಗೆ ಭಾರಿಸಿದ್ದಾರೆ. ಈ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಪೊಲೀಸ್ ಅಧಿಕಾರಿಯ ಕೃತ್ಯ ಕಾನೂನು ಬಾಹಿರ ಎಂದು ಕೆಲ ನೆಟ್ಟಿಗರು ಆಕ್ರೋಶ ವ್ಕಕ್ತಪಡಿಸುತ್ತಿದ್ದು, ಯಾವುದೇ ಅಧಿಕಾರವಿಲ್ಲದಿದ್ದರೂ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿರುವುದು ಅಕ್ಷಮ್ಯ. ಅವರ ವಿರುದ್ಧ ಇಲಾಖೆಯ ಹಿರಿಯ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ. ಮತ್ತೊಬ್ಬ ಬಳಕೆದಾರ ಅಧಿಕಾರಿ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಒಬ್ಬ ಬಳಕೆದಾರರು, “ತುಂಬಾ ಕೆಟ್ಟ ನಡವಳಿಕೆ” ಎಂದು ಕಾಮೆಂಟ್ ಮಾಡಿದರೆ, ಇನ್ನೊಬ್ಬರು, “ಟ್ರಾಫಿಕ್ ನಿಯಂತ್ರಿಸುವ ಬದಲು, ಈ ಜನರು ಸವಾರರನ್ನು ಏಕೆ ಹೊಡೆಯುತ್ತಿದ್ದಾರೆ?” ಎಂದು ಬರೆದಿದ್ದಾರೆ. ಮೂರನೆಯವರು, “ಈ ಪೊಲೀಸ್ ವ್ಯಕ್ತಿ ಸಾಮಾನ್ಯ ಮನುಷ್ಯನನ್ನು ಹೊಡೆಯಲು ಎಷ್ಟು ಧೈರ್ಯ? ದಯವಿಟ್ಟು ಈ ಗುಂಡಾ ಪೊಲೀಸರ ಮೇಲೆ ಕಠಿಣ ಕ್ರಮ ಕೈಗೊಳ್ಳಿ. ಇಲಾಖೆಯಲ್ಲಿ ನಮಗೆ ಅಂತಹ ಗುಂಡಾಗಳು ಅಗತ್ಯವಿಲ್ಲ” ಎಂದು ಕೇಳಿದರು.
ಬೆಂಗಳೂರು ಸಂಚಾರ ಪೊಲೀಸರು ಈ ಘಟನೆಯ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



