ಸರ್ಕಾರಿ ಜಾಗದಲ್ಲಿ ಸಂಘ ಚಟುವಟಿಕೆಗೆ ಇಂದಿನಿಂದಲೇ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ
ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ಸೇರಿದಂತೆ ಇತರೆ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸರ್ಕಾರಿ ಜಾಗದಲ್ಲಿ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವುದಕ್ಕೆ ಪೂರ್ವಾನುಮತಿ ಕಡ್ಡಾಯವಾಗಿದೆ.

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ಸೇರಿದಂತೆ ಇತರೆ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸರ್ಕಾರಿ ಜಾಗದಲ್ಲಿ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವುದಕ್ಕೆ ಪೂರ್ವಾನುಮತಿ ಕಡ್ಡಾಯವಾಗಿದ್ದು ಈ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಸಂಪುಟದ ತೀರ್ಮಾನದಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಲಾಗಿದೆ. ಇಂದಿನಿಂದಲೇ ರಾಜ್ಯ ಸರ್ಕಾರದ ಆದೇಶ ಜಾರಿಯಾಗಲಿದೆ.
ಯಾವುದೇ ಸಂಘಟನೆಯಾಗಲೀ ಇಂದಿನಿಂದಲೇ ಸರ್ಕಾರಿ ಶಾಲಾ-ಕಾಲೇಜುಗಳು, ಅನುದಾನಿತ ಶಾಲೆಗಳು, ಉನ್ನತ ಶಿಕ್ಷಣ ಇಲಾಖೆ, ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅನುಮತಿ ಪಡೆಯಬೇಕು. ಉದ್ಯಾನವನ, ಮೈದಾನಗಳು ಇತರೆ ತೆರೆದ ಸ್ಥಳಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಅನುಮತಿ ಪಡೆಯಬೇಕು. ರಸ್ತೆಗಳು, ಸರ್ಕಾರದ ಇತರೆ ಆಸ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಕಮಿಷನರ್, ಅಧೀಕ್ಷಕರ ಒಪ್ಪಿಗೆ ಪಡೆಯಬೇಕು ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



