Karnataka weather: ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ನಿರೀಕ್ಷೆ, 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳದಲ್ಲಿ ಮಳೆ ತುಸು ಹೆಚ್ಚಾಗುವ ನಿರೀಕ್ಷೆ ಇದೆ.

ಬೆಂಗಳೂರು: ಚಳಿಗಾಲ ಋತುವಿಗೆ ಹತ್ತಿರ ಬಂದರೂ ರಾಜ್ಯದಲ್ಲಿ ಮಳೆ ಕಡಿಮೆಯಾಗಿಲ್ಲ. ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡು ಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶದಲ್ಲಿ ಸಾಧಾರಣ ಮಳೆ, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಳೆ ಬೀಳುವ ಜಿಲ್ಲೆಗಳು
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳದಲ್ಲಿ ಮಳೆ ತುಸು ಹೆಚ್ಚಾಗುವ ನಿರೀಕ್ಷೆ ಇದೆ. ಹವಾಮಾನ ವೈಪರೀತ್ಯದ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ.ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.
ಬೆಂಗಳೂರಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕಳೆದ ಹಲವು ದಿನಗಳಿಂದ ಬೆಳಗಿನ ಹೊತ್ತು ಮೋಡ ಕವಿದ ವಾತಾವರಣ ರಾತ್ರಿ ವೇಳೆ ಮಳೆಯಾಗುತ್ತಿದೆ. ಬೆಂಗಳೂರಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಶೇ.80ರಿಂದ 100ರಷ್ಟು ಮಳೆಯಾಗುವ ನಿರೀಕ್ಷೆ ಇದ್ದು, ಗಾಳಿಯ ವೇಗ ಗಂಟೆಗೆ 14-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 22-26 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



