ಅವರಿಗೆ ವೈಯಕ್ತಿಕ ಅಜೆಂಡಾ ಇದೆ ಎಂದ ಡಿ.ಕೆ ಶಿವಕುಮಾರ್ ಗೆ ತಿರುಗೇಟು: ಕಿರಣ್ ಮಜುಂದಾರ್ ಶಾ ಹೇಳಿದ್ದೇನು?
ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿ ಕಿರಣ್ ಮಜೂಂದಾರ್ ಶಾ ಅವರು ಮೂಲಭೂತಸೌಕರ್ಯಗಳ ಬಗ್ಗೆ ಮಾತನಾಡಿರುವುದಕ್ಕೆ ಡಿಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದರು.

ಬೆಂಗಳೂರು: ಬೆಂಗಳೂರು ನಗರದ ರಸ್ತೆಗುಂಡಿ, ಟ್ರಾಫಿಕ್ ದಟ್ಟಣೆ, ಕಸದ ಸಮಸ್ಯೆ ಬಗ್ಗೆ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರುಗಳ ಮಧ್ಯೆ ಮಾತಿನ ಚಕಮಕಿ ಮುಂದುವರಿದಿದೆ.
ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿ ಕಿರಣ್ ಮಜೂಂದಾರ್ ಶಾ ಅವರು ಮೂಲಭೂತಸೌಕರ್ಯಗಳ ಬಗ್ಗೆ ಮಾತನಾಡಿರುವುದಕ್ಕೆ ಡಿಸಿಎಂ ಆಕ್ಷೇಪ ವ್ಯಕ್ತಪಡಿಸಿ ಅವರಿಗೆ ವೈಯಕ್ತಿಕ ಅಜೆಂಡಾ ಇರಬೇಕು, ಬಿಜೆಪಿ ಆಡಳಿತಾವಧಿಯಲ್ಲಿ ಅವರು ಯಾಕೆ ಬಾಯಿ ತೆರೆಯಲಿಲ್ಲ. ಅವರೊಂದಿಗೆ ಇವರು ಕೆಲವು ವೈಯಕ್ತಿಕ ಅಜೆಂಡಾ ಹೊದಿದ್ದಾರೆ ಎಂದಿದ್ದರು.
ಈ ಬಗ್ಗೆ ತಿರುಗೇಟು ನೀಡಿರುವ ಉದ್ಯಮಿ ಕಿರಣ್ ಮಜೂಂದಾರ್ ಶಾ, ಡಿಕೆ ಶಿವಕುಮಾರ್ ಮಾತು ಸತ್ಯವಲ್ಲ. ಪೈ ಮತ್ತು ನಾನು ಇಬ್ಬರೂ ಈ ಹಿಂದಿನಿಂದಲ್ಲೂ ಟೀಕಿಸುತ್ತಾ ಬಂದಿದ್ದೇವೆ. ಈಗಲೂ ಹೇಳುತ್ತಿದ್ದೇವೆ, ಇದರಲ್ಲಿ ಯಾವುದೇ ವೈಯಕ್ತಿಕ ಅಜೆಂಡಾ ಇಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



