ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್‌ಗೆ ಗುದ್ದಿದ ಇನ್ನೋವಾ ಕಾರು: ಸ್ಥಳದಲ್ಲೇ ಇಬ್ಬರ ದುರ್ಮರಣ
ಸ್ನೇಹಿತ ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ ಬೈಕ್‌ನಲ್ಲಿ ಅನು (19) ಹಾಗೂ ಛಾಯಾ (20) ಬಂದಿದ್ದರು.

ಹಾಸನ: ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ.
ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ನೇಹಿತ ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ ಬೈಕ್‌ನಲ್ಲಿ ಅನು (19) ಹಾಗೂ ಛಾಯಾ (20) ಬಂದಿದ್ದರು.
ಹಾಸನಾಂಬ ದೇವಿ ದರ್ಶನ ಮುಗಿಸಿ ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಹೌಸಿಂಗ್ ಬೋರ್ಡ್ ಬಳಿ ವೇಗವಾಗಿ ಬಂದು ಮೊದಲು ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ಬೈಕ್‌ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದೆ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಬಸವರಾಜು ಹಾಗೂ ಅನುಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಯುವತಿ ಛಾಯಾ ಸ್ಥಿತಿ ಚಿಂತಾಜನಕವಾಗಿದ್ದು, ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಅಪಘಾತದಲ್ಲಿ ಆಕ್ಟಿವಾ ಸವಾರ ಮೊಹಮ್ಮದ್ ಶಾಹಿದ್‌ಗೂ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



