ರಾಜ್ಯ ಸರ್ಕಾರಕ್ಕೆ ಸೆಡ್ಡು: ಕಲಬುರಗಿಯಲ್ಲಿ ನಡೆದ RSS ಪಥಸಂಚಲನದಲ್ಲಿ ಸರ್ಕಾರಿ ವೈದ್ಯ, Congress ಕಾರ್ಯಕರ್ತರು ಭಾಗಿ!
ಸರ್ಕಾರಿ ಕೆಲಸದಲ್ಲಿರುವವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅಂತಹವರನ್ನು ಕೆಲಸದಿಂದ ಅಮಾನತು ಮಾಡುತ್ತಿದೆ.

ಕಲಬುರಗಿ: ಸರ್ಕಾರಿ ಕೆಲಸದಲ್ಲಿರುವವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅಂತಹವರನ್ನು ಕೆಲಸದಿಂದ ಅಮಾನತು ಮಾಡುತ್ತಿದೆ. ಹೀಗಿದ್ದರೂ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಡೆದ RSS ಪಥಸಂಚಲನದಲ್ಲಿ ಓರ್ವ ಸರ್ಕಾರಿ ವೈದ್ಯಾಧಿಕಾರಿ ಮತ್ತು ಹಲವು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದಾರೆ. ಸೇಡಂ ತಾಲೂಕಿನ ಆಡಳಿತ ವೈದ್ಯಾಧಿಕಾರಿಯಾದ ನಾಗರಾಜ್ ಅವರು RSS ಗಣವೇಷ ಧರಿಸಿ ಈ ಪಥಸಂಚಲನದಲ್ಲಿ ಪಾಲ್ಗೊಂಡಿದ್ದಾರೆ. RSS ಸ್ಥಾಪನೆಯಾಗಿ ನೂರು ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ ಈ ಪಥಸಂಚಲನವನ್ನು ಆಯೋಜಿಸಲಾಗಿತ್ತು. ಅಕ್ಟೋಬರ್ 12 ರಂದು ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಪಥಸಂಚಲನ ಕಾರ್ಯಕ್ರಮದಲ್ಲಿ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಭಾಗವಹಿಸಿದ್ದಕ್ಕಾಗಿ ಅವರನ್ನೂ ಅಮಾನತುಗೊಳಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



