ಮೂಢನಂಬಿಕೆ ಧಿಕ್ಕರಿಸಿ ಕಿತ್ತೂರು ಉತ್ಸವ ಸಮಾರೋಪ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ
ಕಳೆದ ವರ್ಷ ಕೂಡ ಸಿದ್ದರಾಮಯ್ಯ ಅವರು ಕಿತ್ತೂರು ಉತ್ಸವದಲ್ಲಿ ಭಾಗವಹಿಸಿದ್ದರು. ನಾಯಕತ್ವವು ಮೂಢನಂಬಿಕೆಯಲ್ಲ, ಧೈರ್ಯ ಮತ್ತು ದೃಢಸಂಕಲ್ಪದ ಬಗ್ಗೆ ಎಂದು ಸಾಬೀತುಪಡಿಸಿದ್ದರು.

ಬೆಳಗಾವಿ: ಕಿತ್ತೂರಿಗೆ ಭೇಟಿ ನೀಡುವ ಯಾವುದೇ ಮುಖ್ಯಮಂತ್ರಿ ಶೀಘ್ರದಲ್ಲೇ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢ ನಂಬಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಧಿಕ್ಕರಿಸಿದ್ದು, ಕಿತ್ತೂರಿನಲ್ಲಿ ನಡೆಯುತ್ತಿರುವ 201ನೇ ಕಿತ್ತೂರು ವಿಜಯೋತ್ಸವದ ಸಮಾರೋಪದಲ್ಲಿ ಭಾಗವಹಿಸಲು ಮುಂದಾಗಿದ್ದಾರೆ.
ಗುರುವಾರದಿಂದ ವಿಜಯೋತ್ಸವದ ವಿವಿಧ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದು, ಅ.25ರಂದು ಸಂಜೆ 7ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ಸಚಿವರು ಪಾಲ್ಗೊಳ್ಳಲಿದ್ದಾರೆ.
ಸಂಜೆ 4ಕ್ಕೆ ಬೆಂಗಳೂರಿನಿಂದ ವಿಮಾನದಲ್ಲಿ ಹೊರಡುವ ಮುಖ್ಯಮಂತ್ರಿಗಳು, ಸಂಜೆ 5ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ರಸ್ತೆ ಮೂಲಕ ಕಿತ್ತೂರಿನ ಕೋಟೆಗೆ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ. ರಸ್ತೆ ಮೂಲಕ ಹುಬ್ಬಳ್ಳಿಗೆ ತೆರಳಿ, ವಿಮಾನದ ಮೂಲಕ ಬೆಂಗಳೂರಿಗೆ ಮರಳುವರು ಎಂದು ಪ್ರಕಟಣೆ ತಿಳಿಸಿದೆ.
ಕಳೆದ ವರ್ಷ ಕೂಡ ಸಿದ್ದರಾಮಯ್ಯ ಅವರು ಕಿತ್ತೂರು ಉತ್ಸವದಲ್ಲಿ ಭಾಗವಹಿಸಿದ್ದರು. ನಾಯಕತ್ವವು ಮೂಢನಂಬಿಕೆಯಲ್ಲ, ಧೈರ್ಯ ಮತ್ತು ದೃಢಸಂಕಲ್ಪದ ಬಗ್ಗೆ ಎಂದು ಸಾಬೀತುಪಡಿಸಿದ್ದರು. ಈ ವರ್ಷ ಕೂಡ ಸತತ ಎರಡನೇ ಬಾರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು, ಅವರ ನಿರ್ಧಾರವು ಕಿತ್ತೂರಿನ ಜನರಿಗೆ ಸಂತಸ ತಂದಿದೆ,
ಮೂಢ ನಂಬಿಕೆಯ ವಿರುದ್ಧ ಸಿದ್ದರಾಮಯ್ಯ ಅವರ ನಿಲುವು ಹೊಸದೇನಲ್ಲ. ವಾಸ್ತು ಸಂಬಂಧಿತ ಮೂಢನಂಬಿಕೆಗಳಿಂದಾಗಿ ವರ್ಷಗಳಿಂದ ಮುಚ್ಚಲ್ಪಟ್ಟಿದ್ದ ವಿಧಾನಸೌಧದ ದಕ್ಷಿಣ ದ್ವಾರವನ್ನು ಸಿದ್ದರಾಮಯ್ಯ ಅವರು ಮತ್ತೆ ತೆರೆದಿದ್ದರು. ಅಧಿಕಾರ ಕಳೆದುಕೊಳ್ಳುವ ಭಯದಿಂದ ಅನೇಕ ರಾಜಕಾರಣಿಗಳು ತಪ್ಪಿಸಿಕೊಂಡಿದ್ದ ಚಾಮರಾಜನಗರ ಮತ್ತು ಹಂಪಿಗೂ ಭೇಟಿ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



