ಬೆಂಗಳೂರು ಟನಲ್ ರೋಡ್ ವಿರುದ್ಧ ಪ್ರಕಾಶ್ ಬೆಳವಾಡಿ ಅರ್ಜಿ; ತೇಜಸ್ವಿ ಸೂರ್ಯ ವಾದ ಮಂಡನೆ
ಸಂಸದ ತೇಜಸ್ವಿ ಸೂರ್ಯ ಸ್ವತಃ ವಕೀಲರೂ ಆಗಿದ್ದು, ಹೈಕೋರ್ಟ್‌ನಲ್ಲಿ ಖುದ್ದು ವಾದ ಮಂಡನೆ ಮಾಡಿ, ಈ ಯೋಜನೆ ಸುಮಾರು 6.5 ಎಕರೆ ಲಾಲ್‌ಬಾಗ್ ಭೂಮಿ ಮೇಲೆ ಪರಿಣಾಮ ಬೀರಬಹುದು ಎಂದು ವಾದ ಮಂಡಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಸುರಂಗ ರಸ್ತೆ ಯೋಜನೆ ವಿರುದ್ಧ ಸಂಸದ ತೇಜಸ್ವಿ ಸೂರ್ಯ, ನಟ ಪ್ರಕಾಶ್ ಬೆಳವಾಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಯೋಜನೆಗೆ ಪರಿಸರ ಪರಿಣಾಮ ಮೌಲ್ಯಮಾಪನವನ್ನು ನಡೆಸದಿರುವುದು, ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರದೊಂದಿಗೆ ಸಮಾಲೋಚಿಸದಿರುವುದು ಮತ್ತು ವಿವರವಾದ ಯೋಜನಾ ವರದಿ, ವಿಶೇಷವಾಗಿ ಐತಿಹಾಸಿಕ ಲಾಲ್‌ಬಾಗ್ ಬಂಡೆಯ ಕೆಳಗೆ ಹಾದುಹೋಗುವ ಸುರಂಗದ ಜೋಡಣೆಯ ಬಗ್ಗೆ ಇರುವ ಕಳವಳಗಳನ್ನು ಉಲ್ಲೇಖಿಸಿ ಯೋಜನೆಯನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.
ಸಂಸದ ತೇಜಸ್ವಿ ಸೂರ್ಯ ಸ್ವತಃ ವಕೀಲರೂ ಆಗಿದ್ದು, ಹೈಕೋರ್ಟ್‌ನಲ್ಲಿ ಖುದ್ದು ವಾದ ಮಂಡನೆ ಮಾಡಿ, ಈ ಯೋಜನೆ ಸುಮಾರು 6.5 ಎಕರೆ ಲಾಲ್‌ಬಾಗ್ ಭೂಮಿ ಮೇಲೆ ಪರಿಣಾಮ ಬೀರಬಹುದು. ರಾಷ್ಟ್ರೀಯ ಭೂವೈಜ್ಞಾನಿಕ ಸ್ಮಾರಕ ಎಂದು ಗುರುತಿಸಲ್ಪಟ್ಟಿರುವ 3,000 ಮಿಲಿಯನ್ ವರ್ಷಗಳಷ್ಟು ಹಳೆಯದಾದ ಲಾಲ್‌ಬಾಗ್ ಬಂಡೆಗೆ ಈ ಯೋಜನೆ ಮಾರಕವಾಗಿದೆ. ತೋಡುವ ಸುರಂಗದಿಂದಾಗಿ ಈ ಬಂಡೆಯು ಗಂಭೀರ ಅಪಾಯವನ್ನು ಎದುರಿಸುತ್ತದೆ. ಹಲವು ಮರಗಳಿಗೂ ಕೊಡಲಿ ಬೀಳಲಿದೆ ಎಂದು ಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಯೋಜನೆಯೊಂದಿಗೆ ಸಂಬಂಧಿಸಿದ ಮರಗಳನ್ನು ಕಡಿಯುವ ಪ್ರಸ್ತಾವನೆಯ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸರ್ಕಾರಿ ವಕೀಲರಿಗೆ ಕೋರ್ಟ್ ಸೂಚನೆ ನೀಡಿದೆ. ಪರಿಸರ ಪರಿಣಾಮ ಮೌಲ್ಯಮಾಪನದ ಕುರಿತು ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯಿಂದಲೂ ಅಭಿಪ್ರಾಯ ಕೇಳಿದ ಕೋರ್ಟ್, ವಿಚಾರಣೆಯನ್ನು ಅಕ್ಟೋಬರ್ 28ರಂದು ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



