ರಾಜ್ಯ

ರಾಜ್ಯದ ರೈತರಿಗೆ ವಂಚಿಸಿದವರ 'ಕೇಸ್' ಮುಚ್ಚಿಹಾಕಲು ಸಚಿವ ಜಮೀರ್ ಪ್ರಭಾವ! ಸ್ಪೋಟಕ Audio ವೈರಲ್

ಈ ಆಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಜೆಡಿಎಸ್, ಜಮ್ಮೀರ್ ಅಹ್ಮದ್ ವಿರುದ್ಧ ಕಿಡಿಕಾರಿದೆ.

ರಾಜ್ಯದ ರೈತರಿಗೆ ವಂಚಿಸಿದವರ 'ಕೇಸ್' ಮುಚ್ಚಿಹಾಕಲು ಸಚಿವ ಜಮೀರ್ ಪ್ರಭಾವ! ಸ್ಪೋಟಕ Audio ವೈರಲ್
ಜಮೀರ್ ಅಹ್ಮದ್ ಖಾನ್ ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದ ರೈತರಿಗೆ ವಂಚಿಸಿದ ತೆಲಂಗಾಣದ ವ್ಯಾಪಾರಿಗಳ ಕೇಸ್ ಮುಚ್ಚಿಹಾಕಲು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಭಾವ ಬೀರಿದ್ದಾರೆ ಎನ್ನಲಾದ ಪೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ.

ಚಿಕ್ಕಬಳ್ಳಾಪುರದ ಪೆರೆಸಂದ್ರ ಪಿಐಸ್ ಐ ಜಗದೀಶ್ ರೆಡ್ಡಿ ಅವರಿಗೆ ಫೋನ್ ಮಾಡಿರುವ ಜಮೀರ್ ಅಹ್ಮದ್ ಖಾನ್, ರಾಜ್ಯದ ರೈತರಿಗೆ ವಂಚಕರ ಪರ ನಿಂತಿದ್ದು, ಕೇಸ್ ಸೆಟಲ್ ಮೆಂಟ್ ಮಾಡುವಂತೆ ಒತ್ತಡ ಹಾಕಿದ್ದಾರೆ.

ಈ ಆಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಜೆಡಿಎಸ್, ಜಮ್ಮೀರ್ ಅಹ್ಮದ್ ವಿರುದ್ಧ ಕಿಡಿಕಾರಿದೆ.

ರಾಜ್ಯದ ಜವಾಬ್ದಾರಿಯುತ ಸಚಿವರಾಗಿ ವಂಚಕರ ಪರ ವಹಿಸಿ, ರಾಜ್ಯದ ರೈತರಿಗೆ ಮೋಸ ಮಾಡಲು ಆತ್ಮಸಾಕ್ಷಿ ಹೇಗೆ ಒಪ್ಪುತ್ತದೆ? ಎಂದು ಪ್ರಶ್ನಿಸಿದೆ.

ರಾಜ್ಯದಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯಕೊಡಿಸುವುದನ್ನು ಬಿಟ್ಟು ಪೊಲೀಸ್‌ ಇಲಾಖೆ ಸೆಟಲ್‌ಮೆಂಟ್‌ ಕೇಂದ್ರಗಳಾಗಿವೆ ಎಂಬುದಕ್ಕೆ ಈ ಪ್ರಕರಣ ಉದಾಹರಣೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸಿಎಂ ಸಿದ್ದರಾಮಯ್ಯ ಅವರೇ, ಸದಾ ರೌಡಿಗಳು ಹಾಗೂ ವಂಚಕರ ಪರ ವಹಿಸುವ ಸೆಟಲ್‌ಮೆಂಟ್‌ ಸಚಿವ ಜಮೀರ್‌ ಅವರನ್ನು ಸಂಪುಟದಿಂದ ವಜಾ ಮಾಡಿ. ನಿಮ್ಮ ನೈತಿಕತೆ ಪ್ರದರ್ಶಿಸಿ ಎಂದು ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.