RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ: ಸಿಎಂ ಸಿದ್ದರಾಮಯ್ಯ ವಿರುದ್ಧ Congress ಕಾರ್ಯಕರ್ತರ ಆಕ್ರೋಶ
ಸಾರ್ವಜನಿಕ ಸ್ಥಳಗಳಲ್ಲಿ RSS ಕಾರ್ಯಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿದೆ.

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ಕಾರ್ಯಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿದೆ. ಇದರ ನಡುವೆ ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ಗೆ RSS ಕಾರ್ಯಕರ್ತರೊಬ್ಬರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು ಇದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ತಿಪಟೂರಿನ RSS ಸದಸ್ಯ ಡಾ. ಶ್ರೀಧರ್ ಕುಮಾರ್ ಅವರನ್ನು ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯರನ್ನಾಗಿ ಸರ್ಕಾರ ನೇಮಕ ಮಾಡಿದೆ. ಕೆಎನ್ ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆ ಸಿಎಂ ಸಿದ್ದರಾಮಯ್ಯ ಬಳಿಯೇ ಇದ್ದು ಇದೀಗ ಅವರೇ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಟ್ರಸ್ಟ್ನ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಶ್ರೀಧರ್ ಅವರ ಟ್ರಸ್ಟ್ ಸದಸ್ಯತ್ವ ವಾಪಸ್ ಪಡೆಯುಂತೆ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



