ರಾಜ್ಯ

ಹುಬ್ಬಳ್ಳಿಯ ಉದ್ಯಮಿ, ಗುತ್ತಿಗೆದಾರ ಆನಂದ ಹೂವಿನಹಡಗಲಿ ಲಾಡ್ಜ್‌ನಲ್ಲಿ ಆತ್ಮಹತ್ಯೆ!

ಹುಬ್ಬಳ್ಳಿಯ ಭವಾನಿ ನಗರ ನಿವಾಸಿಯಾದ ಆನಂದ ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದು, ಕುಟುಂಬದವರು ಆಗಮಿಸಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಬ್ಬಳ್ಳಿಯ ಉದ್ಯಮಿ, ಗುತ್ತಿಗೆದಾರ ಆನಂದ ಹೂವಿನಹಡಗಲಿ ಲಾಡ್ಜ್‌ನಲ್ಲಿ ಆತ್ಮಹತ್ಯೆ!
ಆನಂದ ಉಮೇಶ್ ಹೆಗಡೆ
Published On :

ವಿಜಯನಗರ: ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ ಅವರು ಹೂವಿನಹಡಗಲಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಹೂವಿನಹಡಗಲಿ ಪಟ್ಟಣಕ್ಕೆ ಆಗಮಿಸಿದ್ದ ಆನಂದ ಅವರು ದಾಕ್ಷಾಯಣಿ ಲಾಡ್ಜ್‌ನಲ್ಲಿ ಕೊಠಡಿ ಪಡೆದು ತಂಗಿದ್ದರು. ತಾವು ತಂಗಿದ್ದ ಕೋಣೆಯಲ್ಲೇ ಭಾನುವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹುಬ್ಬಳ್ಳಿಯ ಭವಾನಿ ನಗರ ನಿವಾಸಿಯಾದ ಆನಂದ ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದು, ಕುಟುಂಬದವರು ಆಗಮಿಸಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೂವಿನಹಡಗಲಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿಯ ಟೆಂಡ‌ರ್ ಪಡೆದು ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಆನಂದ ಹಾಗೂ ಸ್ನೇಹಿತರಾದ ಸುಧೀಂದ್ರ, ಗೌರೀಶ ಅವರು ಪಾಲುದಾರಿಕೆಯಲ್ಲಿ ಕಂಪನಿಯೊಂದನ್ನು ಸ್ಥಾಪಿಸಿ, ಅದರ ಹೆಸರಲ್ಲಿ ಟೆಂಡರ್‌ಗಳನ್ನು ಪಡೆದು ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.