Winter race ಗೆ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ; ಕುಣಿಗಲ್ಗೆ ಶೀಘ್ರದಲ್ಲೇ ಸ್ಥಳಾಂತರ..!
ಬಿಟಿಸಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸುಮಾರು 80 ಎಕರೆ ಭೂಮಿಯಲ್ಲಿ ಆರು ಎಕರೆಗಳನ್ನು ಕ್ಲಬ್ನ ಆಡಳಿತಾತ್ಮಕ ಕಾರ್ಯಗಳನ್ನು ಮತ್ತು ಇತರ ಚಟುವಟಿಕೆಗಳನ್ನು ನಿರ್ವಹಣೆಗೆ ಬಿಟ್ಟುಕೊಡಲು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.

ಬೆಂಗಳೂರು: ಚಳಿಗಾಲದ ರೇಸ್'ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ ನಡೆಸುತ್ತಿದ್ದು, ಕುಣಿಗಲ್'ಗೆ ಸ್ಥಳಾಂತರಗೊಳ್ಳಲು ರಾಜ್ಯ ಸರ್ಕಾರದ ಅಧಿಕೃತ ಆದೇಶಕ್ಕಾಗಿ ಕಾಯುತ್ತಿದ್ದಾರೆ.
ಬಿಟಿಸಿ ಅಧ್ಯಕ್ಷ ಮಂಜುನಾಥ ರಮೇಶ್ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ಸ್ಥಳಾಂತರಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಕುಣಿಗಲ್ಗೆ ಸ್ಥಳಾಂತರಗೊಳ್ಳುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ.
ನಾವು ಸರ್ಕಾರದ ಸೂಚನೆಗಳನ್ನು ಪಾಲನೆ ಮಾಡಬೇಕಿದೆ ಎಂದು ಪುಣೆಯ ಪೂನವಲ್ಲಾ ಸ್ಟಡ್ ಫಾರ್ಮ್ಸ್ನ ಜವರಾಯ್ ಎಸ್ ಪೂನವಲ್ಲಾ ಅವರು ಹೇಳಿದ್ದಾರೆ. ಇದೇ ವೇಳೆ 2 ವರ್ಷಗಳಲ್ಲಿ ಕುಣಿಗಲ್'ಗೆ ಸ್ಥಳಾಂತರಗೊಳ್ಳುತ್ತಿರುವ ಬಗ್ಗೆಯೂ ಮಾಹಿತಿ ನೀಡಿದರು.
ಬಿಟಿಸಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸುಮಾರು 80 ಎಕರೆ ಭೂಮಿಯಲ್ಲಿ ಆರು ಎಕರೆಗಳನ್ನು ಕ್ಲಬ್ನ ಆಡಳಿತಾತ್ಮಕ ಕಾರ್ಯಗಳನ್ನು ಮತ್ತು ಇತರ ಚಟುವಟಿಕೆಗಳನ್ನು ನಿರ್ವಹಣೆಗೆ ಬಿಟ್ಟುಕೊಡಲು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆಂದು ತಿಳಿಸಿದರು.
ಇದೇ ವೇಳೆ ವಿಂಟರ್ ರೇಸ್ ಕುರಿತಂತೆಯೂ ಮಾಹಿತಿ ನೀಡಿದರು. "ಜಿಎಸ್ಟಿ 2.0 ಅನುಷ್ಠಾನದ ನಂತರ, ನಾವು ರೇಸ್ಗಳನ್ನು ನಡೆಸುವ ಸ್ಥಿತಿಯಲ್ಲಿ ಇರಲಿಲ್ಲ, ಈ ಬಾರಿ ಆಯೋಜಿಸಲಾಗುತ್ತಿದ್ದು, ರೇಸಿಂಗ್ ಒಟ್ಟು 24 ದಿನಗಳ ಕಾಲ ನಡೆಯಲಿದೆ ಎಂದು ಹೇಳಿದರು.
ಜಿಎಸ್'ಟಿ ಸಂಬಂಧ ಸುಪ್ರೀಂಕೋರ್ಟ್ ಮೆಟ್ಟಿಲೇರಲಾಗಿದೆ. ಸರಕುಗಳ' ಮೇಲೆ ವಿಧಿಸಲಾದ ಶೇಕಡಾ 40 ರಷ್ಟು ತೆರಿಗೆಯಿಂದ ಬೆಟ್ಟಿಂಗ್ಗೆ ವಿನಾಯಿತಿ ನೀಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



