ರಾಜ್ಯ

Wi-Fi ಯೂಸರ್ ನೇಮ್​ನಲ್ಲಿ 'Pakistan Zindabad': ಕ್ರಮಕ್ಕೆ ಸ್ಥಳೀಯರ ಆಗ್ರಹ

ಬಿ ಗೋವರ್ಧನ್ ಸಿಂಗ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಇಂಟರ್ನೆಟ್ ಸೌಲಭ್ಯ ಪಡೆಯಲು ವೈ-ಫೈ ನೆಟ್‌ವರ್ಕ್‌ಗಳನ್ನು ಪರಿಶೀಲಿಸುವಾಗ, 'ಪಾಕಿಸ್ತಾನ ಜಿಂದಾಬಾದ್' ಎಂಬ ವೈ-ಫೈ ಸಂಪರ್ಕ ಕಂಡುಬಂದಿದೆ.

Wi-Fi ಯೂಸರ್ ನೇಮ್​ನಲ್ಲಿ 'Pakistan Zindabad': ಕ್ರಮಕ್ಕೆ ಸ್ಥಳೀಯರ ಆಗ್ರಹ
ವೈಫೈ ಕನೆಕ್ಷನ್ ಸರ್ಚಿಂಗ್ ವೇಳೆ ಪಾಕಿಸ್ತಾನ ಜಿಂದಾಬಾದ್ ಪತ್ತೆಯಾಗಿರುವುದು.
Published On :

ಬೆಂಗಳೂರು: ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲುಬಾಳು ಗ್ರಾಮದಲ್ಲಿ ಕೆಲವರು ಮೊಬೈಲ್ ವೈಫೈ ಕನೆಕ್ಷನ್​ ಸರ್ಚಿಂಗ್​ ವೇಳೆ ಪಾಕಿಸ್ತಾನ ಜಿಂದಾಬಾದ್ ಯೂಸರ್ ಐಡಿ ನೇಮ್ ತೋರಿಸಿದ್ದು, ಇದನ್ನು ಕಂಡ ಜನರು ಶಾಕ್‌ ಆಗಿದ್ದಾರೆ.

ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲುಬಾಳು ಗ್ರಾಮದಲ್ಲಿ ಕೆಲವರು ಮೊಬೈಲ್ ವೈಫೈ ಕನೆಕ್ಷನ್​ ಸರ್ಚಿಂಗ್​ ವೇಳೆ ಪಾಕಿಸ್ತಾನ ಜಿಂದಾಬಾದ್ ಯೂಸರ್ ಐಡಿ ನೇಮ್ ತೋರಿಸಿದೆ. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಿ ಗೋವರ್ಧನ್ ಸಿಂಗ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಇಂಟರ್ನೆಟ್ ಸೌಲಭ್ಯ ಪಡೆಯಲು ವೈ-ಫೈ ನೆಟ್‌ವರ್ಕ್‌ಗಳನ್ನು ಪರಿಶೀಲಿಸುವಾಗ, 'ಪಾಕಿಸ್ತಾನ ಜಿಂದಾಬಾದ್' ಎಂಬ ವೈ-ಫೈ ಸಂಪರ್ಕ ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದೂರುದಾರರು ವೈ-ಫೈ ಬಳಕೆದಾರ ಹೆಸರನ್ನು ಸಾಕ್ಷಿಯಾಗಿ ತೋರಿಸುವ ವೀಡಿಯೊವನ್ನು ಸಹ ರೆಕಾರ್ಡ್ ಮಾಡಿದ್ದಾರೆ.

ಈ ವೈ-ಫೈ ಸಂಪರ್ಕವು ಸ್ಥಳೀಯ ಸಹಕಾರಿ ಬ್ಯಾಂಕ್‌ಗೆ ಸೇರಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ, ಆದರೆ, ಅಧಿಕಾರಿಗಳು ಇನ್ನೂ ದೃಢೀಕರಿಸಿಲ್ಲ.

ದೂರು ದಾಖಲಿಸಿಕೊಂಡಿರುವ ಪೊಲೀಸರು ಹತ್ತಿರದ ಕೆಲವು ಮನೆಗಳಿಗೆ ಭೇಟಿ ನೀಡಿದ್ದರೂ ಯಾವುದೇ ಅನುಮಾನಾಸ್ಪದವಾದ ವಸ್ತು, ಬೆಳವಣಿಗೆಗಳು ಪತ್ತೆಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.