ನವೆಂಬರ್ 1 ರಿಂದ ಪ್ರಯಾಣಿಕರಿಗೆ ಸಿಹಿಸುದ್ದಿ; ಹಳದಿ ಮಾರ್ಗದ ಬಗ್ಗೆ ಮಹತ್ವದ ಮಾಹಿತಿ ನೀಡಿದ BMRCL!
'ಇದರಿಂದಾಗಿ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆಯು ಎಲ್ಲ ದಿನಗಳಿಗೆ ಅನ್ವಯವಾಗುತ್ತದೆ'.

ಬೆಂಗಳೂರು: 70ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ, ನವೆಂಬರ್ 1 ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲು ಸೇವೆ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಶುಕ್ರವಾರ ಘೋಷಿಸಿದೆ.
ಈ ಹೊಸ ರೈಲಿನ ಸೇರ್ಪಡೆಯೊಂದಿಗೆ, ಹಳದಿ ಮಾರ್ಗದಲ್ಲಿ ಪೀಕ್ ಅವರ್‌ನಲ್ಲಿ ರೈಲುಗಳ ಆವರ್ತನವು 19 ನಿಮಿಷಗಳಿಗೆ ಬದಲಾಗಿ ಪ್ರತಿ 15 ನಿಮಿಷಕ್ಕೆ ರೈಲುಗಳು ಚಲಿಸಲಿವೆ ಎಂದು ಅದು ಹೇಳಿದೆ.
'ಇದರಿಂದಾಗಿ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆಯು ಎಲ್ಲ ದಿನಗಳಿಗೆ ಅನ್ವಯವಾಗುತ್ತದೆ' ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಹೇಳಿಕೆಯಲ್ಲಿ ತಿಳಿಸಿದೆ.
ಆರ್‌ವಿ ರಸ್ತೆ ಮತ್ತು ಬೊಮ್ಮಸಂದ್ರ ಟರ್ಮಿನಲ್‌ಗಳಿಂದ ಹೊರಡುವ ಮೊದಲ ಮತ್ತು ಕೊನೆಯ ರೈಲುಗಳ ಸಮಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಈ ಸುಧಾರಿತ ಮೆಟ್ರೋ ಸೇವೆಗಳ ಸದುಪಯೋಗ ಪಡೆಯುವಂತೆ ಎಂದು ನಿಗಮ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



