ಬಾಗಲಕೋಟೆ: 7ನೇ ತರಗತಿ ವಿದ್ಯಾರ್ಥಿನಿ ಎರಡು ತಿಂಗಳ ಗರ್ಭಿಣಿ; 8ನೇ ಕ್ಲಾಸ್ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆ ದಾಖಲು
ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ, ಇಳಕಲ್ ಗ್ರಾಮೀಣ ಪೊಲೀಸರು ಅದೇ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಕಂದಗಲ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆ.
ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ, ಇಳಕಲ್ ಗ್ರಾಮೀಣ ಪೊಲೀಸರು ಅದೇ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಶಾಲಾ ಆವರಣದಲ್ಲಿ ಮತ್ತು ಲೋಕಾಪುರ ಬಳಿಯ ಹೊಲದಲ್ಲಿ ಬಾಲಕಿಯೊಂದಿಗೆ ಕೆಲವು ಬಾರಿ ದೈಹಿಕ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಕರ್ನಾಟಕ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಈ ಸಂಬಂಧ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಬಾಲಕ ಅಪ್ರಾಪ್ತ ವಯಸ್ಕನಾಗಿರುವುದರಿಂದ, ಅವನನ್ನು ಕಾನೂನಿನೊಂದಿಗೆ ಸಂಘರ್ಷದಲ್ಲಿರುವ ಮಗು ಎಂದು ಪರಿಗಣಿಸಲಾಗುವುದು. ಶಶಿಧರ್ ಅವರು ಈಗಾಗಲೇ ಬಾಗಲಕೋಟೆ ಎಸ್‌ಪಿ ಜೊತೆ ಮಾತನಾಡಿದ್ದು, ಸೋಮವಾರ ಬಾಲಕನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸುವಂತೆ ಕೇಳಿಕೊಂಡಿದ್ದಾರೆ. ನಂತರ, ಬಾಲಕನನ್ನು ವೀಕ್ಷಣಾ ಗೃಹಕ್ಕೆ ಕಳುಹಿಸಲಾಗುವುದು ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



