ಜಾತ್ಯತೀತ-ಧರ್ಮಾತೀತ ಕರ್ನಾಟಕ ನಿರ್ಮಿಸಿದ ಕೀರ್ತಿ ಅರಸು ಸಮುದಾಯಕ್ಕೆ ಸಲ್ಲುತ್ತದೆ: DCM ಡಿ.ಕೆ ಶಿವಕುಮಾರ್
ಅರಸು ಸಮುದಾಯವು ಗಾತ್ರದಲ್ಲಿ ಚಿಕ್ಕದಿರಬಹುದು. ಆದರೆ, ಈ ರಾಜ್ಯಕ್ಕೆ ಅವರು ನೀಡಿರುವ ಕೊಡುಗೆ ಬಹುದೊಡ್ಡದು. ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪರಾಜಮ್ಮಣ್ಣಿ, ಜಯಚಾಮರಾಜೇಂದ್ರ ಒಡೆಯರ್ ಅವರು ಹೀಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಬೆಂಗಳೂರು: ಮಾನವ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿ ಜಾತ್ಯತೀತ ಮತ್ತು ಧರ್ಮಾತೀತವಾಗಿ ಕರ್ನಾಟಕವನ್ನು ನಿರ್ಮಿಸಲು ಮೈಸೂರು ರಾಜರು ಮತ್ತು ಅರಸು ಸಮುದಾಯದ ಕೊಡುಗೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ಶ್ಲಾಘಿಸಿದರು.
ಅರಮನೆ ಮೈದಾನದಲ್ಲಿ ನಡೆದ ಅರಸು ಸಂಘದ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದ ಅವರು, ಅರಸು ಸಮುದಾಯವು ಗಾತ್ರದಲ್ಲಿ ಚಿಕ್ಕದಿರಬಹುದು. ಆದರೆ, ಈ ರಾಜ್ಯಕ್ಕೆ ಅವರು ನೀಡಿರುವ ಕೊಡುಗೆ ಬಹುದೊಡ್ಡದು. ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪರಾಜಮ್ಮಣ್ಣಿ, ಜಯಚಾಮರಾಜೇಂದ್ರ ಒಡೆಯರ್ ಅವರು ಹೀಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕನ್ನಂಬಾಡಿ ಕಟ್ಟೆ, ವಾಣಿವಿಲಾಸ ಸಾಗರ ಅಣೆಕಟ್ಟು, ಜೆ.ಸಿ ಎಂಜಿನಿಯರ್ ಕಾಲೇಜು, ವಿಕ್ಟೋರಿಯಾ ಆಸ್ಪತ್ರೆ ಹೀಗೆ ಹಲವಾರು ಜನೋಪಕಾರಿ ಕೆಲಸಗಳಿಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರು ಅರಸರು ಎಂದು ಹೇಳಿದರು.
ವಿದ್ಯುತ್ ಉತ್ಪಾದನೆ ಸೇರಿದಂತೆ ರಾಜ್ಯದ ಪ್ರಮುಖ ಸಂಸ್ಥೆಗಳ ಸ್ಥಾಪನೆಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರಿನ ಒಡೆಯರು. ಅವರು ನೆಟ್ಟಿರುವ ಮರದ ಫಲವನ್ನು ನಾವೆಲ್ಲರೂ ತಿನ್ನುತ್ತಿದ್ದೇವೆ ಎಂದು ಕೊಂಡಾಡಿದರು.
ಅರಸು ಸಮುದಾಯಕ್ಕೆ ಮೀಸಲಾತಿ ಸೇರಿದಂತೆ ಇತರೇ ಅನುಕೂಲಗಳನ್ನು ಕಲ್ಪಿಸಿಕೊಡಬೇಕು ಎಂದು ಮುಖಂಡರು ಮನವಿ ಸಲ್ಲಿಸಿದ್ದಾರೆ. ಇದರ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು. ಸಂಘಕ್ಕೆ ನಿವೇಶನ ಬೇಕು ಎಂದು ಮನವಿ ಸಲ್ಲಿಸಿದ್ದೀರಿ. ನಾನು ಬೆಂಗಳೂರು ಅಭಿವೃದ್ಧಿಯ ಜವಾಬ್ದಾರಿ ಹೊತ್ತಿದ್ದೇನೆ. ಆದ ಕಾರಣ ಸಂಘದ ಪ್ರಮುಖರು ಹಾಗೂ ರಾಜ ವಂಶಸ್ಥರ ಜೊತೆಯಲ್ಲಿ ಚರ್ಚೆ ಮಾಡಿ ನಿಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



