Yelahanka: ಭಾರೀ ಮಳೆಗೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು
ಯಲಹಂಕ ವ್ಯಾಪ್ತಿಯ ಎಂಬಸಿ ಗ್ರೂಪ್‌ನ ಕಟ್ಟಡ ನಿರ್ಮಾಣ ಕಾಮಗಾರಿಯೊಂದರಲ್ಲಿ ಕಾರ್ಮಿಕರು ಮಣ್ಣು ಅಗೆಯುವ ಕೆಲಸದಲ್ಲಿ ತೊಡಗಿದ್ದರು.

ಬೆಂಗಳೂರು: ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿತವಾಗಿದ್ದು ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಎಂಬಸಿ ಗ್ರೂಪ್‌ಗೆ ಸೇರಿದ ಕಟ್ಟಡ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಸೋಮವಾರ ಸಂಭವಿಸಿದೆ.
ಜೆ ಶಿವ (30) ಮತ್ತು ಮಾಂಡುಸೂದನ್ ರೆಡ್ಡಿ (55) ಎಂದು ಗುರ್ತಿಸಲಾಗಿದೆ. ಯಲಹಂಕ ವ್ಯಾಪ್ತಿಯ ಎಂಬಸಿ ಗ್ರೂಪ್‌ನ ಕಟ್ಟಡ ನಿರ್ಮಾಣ ಕಾಮಗಾರಿಯೊಂದರಲ್ಲಿ ಕಾರ್ಮಿಕರು ಮಣ್ಣು ಅಗೆಯುವ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಭಾರೀ ಮಳೆಯಿಂದಾಗಿ ಕಾಮಗಾರಿ ಸ್ಥಳದಲ್ಲಿ ಮಣ್ಣಿನ ರಾಶಿ ಕುಸಿದು ಬಿದ್ದಿದೆ ಎನ್ನಲಾಗಿದೆ.
ಈ ಕುಸಿತದಲ್ಲಿ ಇಬ್ಬರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದರು ಎನ್ನಲಾಗಿದ್ದು, ಆಂಧ್ರಪ್ರದೇಶ ಮೂಲದ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆತ ಕೂಡ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ. ಇದರೊಂದಿಗೆ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಈ ಸಂಬಂಧ ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



