ಜೈಲು ಪಾಲಾಗಿರುವ ನಟಿ ರನ್ಯಾ ರಾವ್ಗೆ ಬಿಗ್ ಶಾಕ್: ಚಿನ್ನ ಕಳ್ಳಸಾಗಣೆ ಕೇಸ್ನಲ್ಲಿ 102 ಕೋಟಿ ರೂ ದಂಡ ಕಟ್ಟುವಂತೆ DRI ನೋಟಿಸ್
ನಟಿ ರನ್ಯಾ ರಾವ್ ಅವರಿಗೆ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಂತಾಗಿದೆ.

ಬೆಂಗಳೂರು: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ (Ranya Rao) ಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು 102.55 ಕೋಟಿ ರೂ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಹಿನ್ನೆಲೆ ಕನ್ನಡದ ನಟಿ ರನ್ಯಾರಾವ್ ರನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಡಿಆರ್ಐ ಅಧಿಕಾರಿಗಳು ರನ್ಯಾರಾವ್ ಬಳಿ 14.8 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. DRI ತನಿಖೆಯಲ್ಲಿ, ರನ್ಯಾ ರಾವ್ ಸುಮಾರು 15 ದಿನಗಳಲ್ಲಿ 4 ಬಾರಿ ದುಬೈಗೆ ಹೋಗಿ ಚಿನ್ನ ಕಳ್ಳಸಾಗಣೆ ಮಾಡಿದ್ದರು ಎಂದು ಬಹಿರಂಗಗೊಂಡಿತ್ತು.
ನಟಿ ರನ್ಯಾ ರಾವ್ ಅವರಿಗೆ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಂತಾಗಿದೆ. ಇನ್ನು ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು (COFEPOSA) ಜಾರಿ ಮಾಡಲಾಗಿದ್ದು, ಈ ವಿಷಯವನ್ನು ನಿರ್ವಹಿಸುವ ಸಲಹಾ ಮಂಡಳಿಯು ಇತ್ತೀಚೆಗೆ ರನ್ಯಾ ರಾವ್ ಗೆ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗುವುದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



