ಯಾದಗಿರಿ: 7 ವರ್ಷಗಳಿಂದ ಚಿಕ್ಕಮ್ಮನ ಮೇಲೆ ನಿರಂತರ ಅತ್ಯಾಚಾರ; ಪೇದೆ ಮತ್ತು ಜೆಸ್ಕಾಂ ಉದ್ಯೋಗಿ ವಿರುದ್ಧ ದೂರು ದಾಖಲು!
ರಾಜ್ಯದಲ್ಲಿ ಅಸಹ್ಯಕರ ಘಟನೆಯೊಂದು ನಡೆದಿದೆ. ಕಳೆದ 7 ವರ್ಷಗಳಿಂದ ಜೀವ ಬೆದರಿಕೆ ಹಾಕಿ ಚಿಕ್ಕಮ್ಮನ ಮೇಲೆ ಯುವಕರಿಬ್ಬರು ಮೃಗೀಯವಾಗಿ ನಡೆದುಕೊಂಡಿದ್ದಾರೆ.

ಯಾದಗಿರಿ: ರಾಜ್ಯದಲ್ಲಿ ಅಸಹ್ಯಕರ ಘಟನೆಯೊಂದು ನಡೆದಿದೆ. ಕಳೆದ 7 ವರ್ಷಗಳಿಂದ ಜೀವ ಬೆದರಿಕೆ ಹಾಕಿ ಚಿಕ್ಕಮ್ಮನ ಮೇಲೆ ಯುವಕರಿಬ್ಬರು ಮೃಗೀಯವಾಗಿ ನಡೆದುಕೊಂಡಿದ್ದಾರೆ. ಹೌದು... ಪೊಲೀಸ್ ಪೇದೆ ಹಾಗೂ ಜೆಸ್ಕಾಂ ಉದ್ಯೋಗದಲ್ಲಿರುವ ಯುವಕರು ಪದೇ ಪದೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಗಿರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಯಾದಗಿರಿ ಸಂಚಾರಿ ಠಾಣೆ ಕಾನ್ಸ್ ಟೇಬಲ್ ರಮೇಶ್ ಹಾಗೂ ಆತನ ಸಹೋದರ ಜೆಸ್ಕಾಂ ನೌಕರ ಲಕ್ಷ್ಮಣ್ ಇಬ್ಬರೂ ತಮ್ಮ ಚಿಕ್ಕಪ್ಪನ ಪತ್ನಿ ಚಿಕ್ಕಮ್ಮನ ಮೇಲೆಯೇ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ. ಈ ಬಗ್ಗೆ ಸಂತ್ರಸ್ತ ಮಹಿಳೆ ಯಾದಗಿರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



