KC Veerendra Pappi: ಶಾಸಕ ವಿರೇಂದ್ರ ಪಪ್ಪಿ ನಿವಾಸ ಮೇಲೆ ಮತ್ತೆ ಇಡಿ ದಾಳಿ; 6 ಐಷಾರಾಮಿ ಕಾರುಗಳು ವಶ
ದಾಳಿಯ ಸಂದರ್ಭದಲ್ಲಿ, 6 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ವೀರೇಂದ್ರ ಹೇಳಿಕೆ ಆಧರಿಸಿ ಅವರ ಮನೆ ಮೇಲೆ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

ಚಿತ್ರದುರ್ಗ: ವಿದೇಶಿ ಕರೆನ್ಸಿ ಹಾಗು ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ED) ವಶದಲ್ಲಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ಅಧಿಕಾರಿಗಳು ಮತ್ತೆ ನಿನ್ನೆ ಮಂಗಳವಾರ ಸಾಯಂಕಾಲ ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ, 6 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ವೀರೇಂದ್ರ ಹೇಳಿಕೆ ಆಧರಿಸಿ ಅವರ ಮನೆ ಮೇಲೆ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಹತ್ತಕ್ಕೂ ಹೆಚ್ಚು ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅವರ ಮನೆಯಲ್ಲಿರುವ ಐಶಾರಾಮಿ ಕಾರುಗಳ ಬಗ್ಗೆ ಪರಿಶೀಲನೆ ನಡೆಸಿ ವಶಕ್ಕೆ ಪಡೆದಿದ್ದಾರೆ. ವೀರೇಂದ್ರ ಪಪ್ಪಿಯ ಬ್ಯಾಂಕ್ ಖಾತೆಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಿದ್ದಾರೆ.
ಚಳ್ಳಕೆರೆ ನಗರದ ಕೋಟೆಕ್ ಮಹೇಂದ್ರ ಬ್ಯಾಂಕ್ ಹಾಗೂ ಆಕ್ಸಿಸ್ ಬ್ಯಾಂಕ್‌ಗೆ ಇ.ಡಿ ಅಧಿಕಾರಿಗಳು ತೆರಳಿದ್ದರು. ಆ ಬ್ಯಾಂಕ್‌ನಲ್ಲಿ ವೀರೇಂದ್ರ ಪಪ್ಪಿ ಹಾಗೂ ಅವರ ಕುಟುಂಬ ಸದಸ್ಯರ ಹಣ ವರ್ಗಾವಣೆ ಬಗ್ಗೆ ದಾಖಲೆಯನ್ನು ಕೂಡ ಕಲೆ ಹಾಕಿದ್ದು, 17 ಬ್ಯಾಂಕ್ ಖಾತೆಗಳ ಮೂಲಕ ಆಗಿರುವ ಹಣಕಾಸು ವರ್ಗಾವಣೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಜೊತೆಗೆ ಬೆಟ್ಟಿಂಗ್ ಆಪ್‌ಗಳ ಮೂಲಕ ಗಳಿಸಿದ ಹಣವನ್ನು ಈ ಬ್ಯಾಂಕ್ ಖಾತೆಗಳ ಮೂಲಕ ವರ್ಗಾವಣೆ ಮಾಡುವ ಮೂಲಕ ಅಕ್ರಮ ವ್ಯವಹಾರ ನಡೆಸಿದ್ದಾರೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸಿದ್ದಾರೆ.
ಮೊನ್ನೆ ಆಗಸ್ಟ್ 22ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿ ನಿವಾಸ ಮೇಲೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಮಧ್ಯರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದ್ದರು. ಅಂದು ಪಪ್ಪಿ ಮನೆಯಲ್ಲಿ ಕೋಟಿ ಕೋಟಿ ಹಣ ಜೊತೆ ಚಿನ್ನಾಭರಣ ವಿದೇಶಿ ಕರೆನ್ಸಿಯನ್ನ ಇಡಿ ವಶಕ್ಕೆ ಪಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



