ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 18 ತಿಂಗಳ ಮಗು ಸಜೀವ ದಹನ
ಕಳೆದ 8 ವರ್ಷಗಳಿಂದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. 30 ಫ್ಲಾಟ್‌ಗಳನ್ನು ಹೊಂದಿರುವ ಅಪಾರ್ಟ್‌ಮೆಂಟ್‌ನ ರೂಮ್ ವೊಂದರಲ್ಲಿ ದಂಪತಿಗಳು ಮಗುವಿನೊಂದಿಗೆ ವಾಸವಿದ್ದರು.

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಬಿದ್ದು 18 ತಿಂಗಳ ಮಗು ಸಜೀವ ದಹನವಾಗಿರುವ ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ನಡೆದಿದೆ.
ದುರ್ಘಟನೆಯಲ್ಲಿ ನೇಪಾಳ ಮೂಲದ ಪುಷ್ಕರ ಕುಮಾರ್, ಜ್ಯೋತಿ ಕುಮಾರಿ ದಂಪತಿಯ 18 ತಿಂಗಳ ಪುತ್ರಿ ಅನು ಮೃತ ದುರ್ದೈವಿ.
ಕಳೆದ 8 ವರ್ಷಗಳಿಂದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. 30 ಫ್ಲಾಟ್‌ಗಳನ್ನು ಹೊಂದಿರುವ ಅಪಾರ್ಟ್‌ಮೆಂಟ್‌ನ ರೂಮ್ ವೊಂದರಲ್ಲಿ ದಂಪತಿಗಳು ಮಗುವಿನೊಂದಿಗೆ ವಾಸವಿದ್ದರು. ಅಪಾರ್ಟ್ ಮೆಂಟ್ ನಲ್ಲಿ ಮನೆಗೆಲಸ ಮಾಡುತ್ತಿದ್ದ ದಂಪತಿಗಳು ದುರ್ಘಟನೆ ನಡೆದ ದಿನ ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು.
ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನಗೆ ಬೆಂಕಿ ಹೊತ್ತಿಕೊಂಡು ಮಗು ಸಜೀವ ದಹನವಾಗಿದೆ. ಬೆಂಕಿಯನ್ನು ನೋಡಿದ ಇತರೆ ನಿವಾಸಿಗಳು ಆತಂಕದಿಂದ ಹೊರ ಬಂದಿದ್ದಾರೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.
ಘಟನೆ ಬಳಿಕ ಹೈ ಗ್ರೌಂಡ್ಸ್ ಪೋಲಿಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



