ರಾಜ್ಯ

ನಮ್ಮ 'ಸಂಪ್ರದಾಯ'ಕ್ಕೆ ಧಕ್ಕೆ ಆಗದಂತೆ ದಸರಾ ಉದ್ಘಾಟಕರು ನಡೆದುಕೊಳ್ಳಲಿ: ವಿ. ಸೋಮಣ್ಣ

ಬಾನು ಮುಷ್ತಾಕ್ ಅವರನ್ನು ಬದಲಾಯಿಸಲು ಬಿಜೆಪಿ ಹೇರಿದ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದಿಲ್ಲ. ಬದಲಿಗೆ ದಸರಾ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನ ನೀಡಿದೆ.

ನಮ್ಮ 'ಸಂಪ್ರದಾಯ'ಕ್ಕೆ ಧಕ್ಕೆ ಆಗದಂತೆ ದಸರಾ ಉದ್ಘಾಟಕರು ನಡೆದುಕೊಳ್ಳಲಿ: ವಿ. ಸೋಮಣ್ಣ
ಕೇಂದ್ರ ಸಚಿವ ವಿ. ಸೋಮಣ್ಣ
Published On :

ಮೈಸೂರು: ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟಿಸುವುದು ಅಧಿಕೃತಗೊಂಡಿದೆ.

ಬಾನು ಮುಷ್ತಾಕ್ ಅವರನ್ನು ಬದಲಾಯಿಸಲು ಬಿಜೆಪಿ ಹೇರಿದ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದಿಲ್ಲ. ಬದಲಿಗೆ ದಸರಾ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನ ನೀಡಿದೆ.

ಈ ಮಧ್ಯೆ ಇಂದು ಮೈಸೂರಿನ ಶ್ರೀಕ್ಷೇತ್ರ ಚಾಮುಂಡಿಬೆಟ್ಟಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ ನೀಡಿ, ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿ. ಸೋಮಣ್ಣ, ನಂಬಿಕೆ, ಭಕ್ತಿ ಮತ್ತು ಇತಿಹಾಸಕ್ಕೆ ಮತ್ತೊಂದು ಹೆಸರೇ ಚಾಮುಂಡಿ ಬೆಟ್ಟ. ಸರ್ಕಾರವು ಉದ್ಘಾಟಕರಿಗೆ ತಾಯಿ ಚಾಮುಂಡಿ ಇತಿಹಾಸ, ಉತ್ಸವ, ಆರಾಧನೆ, ಸಂಪ್ರದಾಯವನ್ನು ಮೊದಲು ತಿಳಿಸಲಿ. ಈಗ ಉದ್ಘಾಟಕರಾಗಿ ಆಯ್ಕೆಯಾಗಿರುವವರು, ಈ ಸ್ಥಾನಕ್ಕೆ ಅರ್ಹರೋ ಅಥವಾ ಇಲ್ಲವೋ ಎಂಬ ಚರ್ಚೆ ಮಾಡುವುದಿಲ್ಲ ಎಂದರು.

ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪದೇ ಪದೇ ಎಡವಟ್ಟು ಮಾಡುತ್ತಿದೆ. ಸರ್ಕಾರ ಯಾರನ್ನೋ ತೃಪ್ತಿಪಡಿಸುವ ಕೆಲಸ ಮಾಡುವುದು ಸರಿಯಲ್ಲ. ಚಾಮುಂಡಿ ತಾಯಿಯ ಮನಸ್ಸು ಗೆಲ್ಲುವ ಕೆಲಸ ಮಾಡಿದರೆ ದೇಶ ಮತ್ತು ರಾಜ್ಯಕ್ಕೆ ಒಳ್ಳೆಯದಾಗುತ್ತದೆ. ದಸರಾ ಉದ್ಘಾಟಕರು ನಮ್ಮ ಸಂಪ್ರದಾಯಕ್ಕೆ ಧಕ್ಕೆ ಆಗದಂತೆ ನಡೆದುಕೊಳ್ಳಲಿ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.