Edamuri Falls: ಎಡಮುರಿ ಫಾಲ್ಸ್‌ನಲ್ಲಿ ಮುಳುಗಿ ಇಬ್ಬರು ಬೆಂಗಳೂರು ವಿದ್ಯಾರ್ಥಿಗಳ ಸಾವು
ಮೃತ ವಿದ್ಯಾರ್ಥಿಗಳನ್ನು ಬಿಬಿಎ ವಿದ್ಯಾರ್ಥಿಗಳಾದ ವಿಲಿಯಂ ಶ್ಯಾಮ್(21) ಮತ್ತು ವೆಂಕಟೇಶ್ (21) ಎಂದು ಗುರುತಿಸಲಾಗಿದೆ.

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಎಡಮುರಿ ಜಲಪಾತದಲ್ಲಿ ಮುಳುಗಿ ಇಬ್ಬರು ಬೆಂಗಳೂರಿನ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ (Yedamuri Falls) ಶುಕ್ರವಾರ ನಡೆದಿದೆ.
ಎಡಮುರಿ ಫಾಲ್ಸ್ ನೋಡಲು ಬೆಂಗಳೂರಿನ ಡಾನ್ ಬಾಸ್ಕೋ ಪದವಿ ಕಾಲೇಜಿನ ಇಬ್ಬರು ತೆರಳಿದ್ದರು. ಕಾಲೇಜಿಗೆ ರಜೆ ಇದ್ದ ಕಾರಣ ಸ್ನೇಹಿತರೊಂದಿಗೆ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದಾಗ ದುರ್ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ಬಿಬಿಎ ವಿದ್ಯಾರ್ಥಿಗಳಾದ ವಿಲಿಯಂ ಶ್ಯಾಮ್(21) ಮತ್ತು ವೆಂಕಟೇಶ್ (21) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ ವಿಷಯ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ, ಮೃಹದೇಹಗಳನ್ನು ಹೊರ ತೆಗೆದಿದ್ದಾರೆ.
ವಿಹಾರಕ್ಕೆಂದು ಏಳು ಮಂದಿ ವಿದ್ಯಾರ್ಥಿಗಳ ತಂಡ ಬೆಂಗಳೂರಿನಿಂದ ಎಡಮುರಿ ಫಾಲ್ಸ್ ಗೆ ಬಂದಿತ್ತು. ಈಜಲು ನದಿಗೆ ಇಳಿದಾಗ ವಿಲಿಯಂ ಶ್ಯಾಂ ಮತ್ತು ವೆಂಕಟೇಶ್ ಸುಳಿಗೆ ಸಿಕ್ಕಿ ನೀರಿನಲ್ಲಿ ಮುಳುಗಿದ್ದಾರೆ. ಅವರನ್ನು ರಕ್ಷಿಸಲು ಸಹಪಾಠಿಗಳು ಹಾಗೂ ಸ್ಥಳೀಯರು ನಡೆಸಿದ ಪ್ರಯತ್ನ ವಿಫಲವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೆಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



