SC ಒಳಮೀಸಲಾತಿ ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರ ಆದೇಶ
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹಿನ್ನೆಲೆ 2024ರ ಅಕ್ಟೋಬರ್ 28ರ ನಂತರ ಹೊರಡಿಸಲಾದ ಎಲ್ಲ ನೇಮಕಾತಿ ಅಧಿಸೂಚನೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಬೇಕು.

ಬೆಂಗಳೂರು: ರಾಜ್ಯದ ವಿವಿಧ ಇಲಾಖೆ, ನಿಗಮ-ಮಂಡಳಿ, ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ 2024ರ ಅ.28ರ ಬಳಿಕ ಹೊರಡಿಸಿರುವ ಎಲ್ಲಾ ನೇರ ನೇಮಕಾತಿ ಅಧಿಸೂಚನೆಗಳನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಸಚಿವ ಸಂಪುಟದ ನಿರ್ಣಯದಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ(ಡಿಪಿಎಆರ್) ಸರಕಾರದ ಅಧೀನ ಕಾರ್ಯದರ್ಶಿ ವೀರಭದ್ರ ಅವರು, ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹಿನ್ನೆಲೆ 2024ರ ಅಕ್ಟೋಬರ್ 28ರ ನಂತರ ಹೊರಡಿಸಲಾದ ಎಲ್ಲ ನೇಮಕಾತಿ ಅಧಿಸೂಚನೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.
ಅಲ್ಲದೆ, ಈ ನೇಮಕಾತಿಗಳಿಗೆ ಪರಿಶಿಷ್ಟಜಾತಿ (ಎಸ್ಸಿ) ಒಳಮೀಸಲಾತಿ ಅಳವಡಿಸಿಕೊಂಡು ಕಾಲಮಿತಿಯೊಳಗಾಗಿ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆಯೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳದ ಎಲ್ಲಾ ನೇಮಕಾತಿಗಳಿಗೂ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಅನ್ವಯಿಸಿಕೊಳ್ಳುವಂತೆ ನಿರ್ಧರಿಸಲಾಗಿದೆ. ಈ ಸಂಬಂಧ ಪರಿಶಿಷ್ಟ ಜಾತಿಗಳಲ್ಲಿನ 101 ಜಾತಿಗಳಿಗೆ ರೋಸ್ಟರ್ ಬಿಂದುವನ್ನೂ ನಿಗದಿ ಮಾಡಲಾಗಿದೆ. ಹೀಗಾಗಿ ನೇರ ನೇಮಕಾತಿ ಅಧಿಸೂಚನೆಗಳಿಗೆ ಒಳ ಮೀಸಲಾತಿ ಅನ್ವಯ ಮಾಡಿಕೊಳ್ಳುವಂತೆ ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



