ರಾಜ್ಯ

ಇಸ್ಲಾಂ ಎಂದರೆ ಶಾಂತಿ, ಬಸವಣ್ಣರಂತೆ ಪ್ರವಾದಿಗಳು ಕೆಲಸ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು.

ಇಸ್ಲಾಂ ಎಂದರೆ ಶಾಂತಿ, ಬಸವಣ್ಣರಂತೆ ಪ್ರವಾದಿಗಳು ಕೆಲಸ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ
ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ "ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಇಸ್ಲಾಂ ಎಂದರೆ ಶಾಂತಿ, ಮೊಹಮದ್‌ ಪ್ರವಾದಿ ಎಂದರೆ ಶಾಂತಿಯ ದೂತ. ಪ್ರವಾದಿ ಅವರು, ಬಸವಣ್ಣ ಅವರಂತೆ ಶಾಂತಿ, ಸಮಾನತೆ, ಬಡತನ ಹೋಗಬೇಕು ಅಂತಾ ಹೇಳಿ ಹೋರಾಟ ಮಾಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ "ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ"ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ. ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು ಎಂದು ಹೇಳಿದರು.

ಪ್ರವಾದಿಗಳು ಶಾಂತಿಯ ಧೂತರು. ಇಡೀ ಮಾನವ ಕುಲ ಶಾಂತಿಗಾಗಿ, ಪರಸ್ಪರತೆ, ಸಹೋದರತ್ವಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ಪ್ರವಾದಿಗಳ ಬೋಧನೆಯಾಗಿದೆ. ನಮ್ಮ ಸಂವಿಧಾನದ ಮೂಲ ಆಶಯ ಕೂಡ ಭ್ರಾತೃತ್ವ ಮತ್ತು ಪರಧರ್ಮ ಸಹಿಷ್ಣುತೆಯೇ ಆಗಿದೆ. ಆದ್ದರಿಂದ ಸಂವಿಧಾನವನ್ನು ಆಚರಿಸುವುದು, ಪಾಲಿಸುವುದು ನಮ್ಮೆಲ್ಲರ ಗುರಿಯಾಗಲಿ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.