ಮಂಡ್ಯ: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಕಚೇರಿಯಲ್ಲೇ ಯುವತಿ ಆತ್ಮಹತ್ಯೆ
ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ವಳಗೆರೆ ಮೆಣಸ ಗ್ರಾಮದ ಕಾವ್ಯ(26) ಎಂಬ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂಡ್ಯ: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶುಕ್ರವಾರ ಮಂಡ್ಯ ಜಿಲ್ಲೆ ಕೆಆರ್ ಪೇಟೆಯಲ್ಲಿ ನಡೆದಿದೆ.
ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ವಳಗೆರೆ ಮೆಣಸ ಗ್ರಾಮದ ಕಾವ್ಯ(26) ಎಂಬ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಯುವತಿಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜೊತೆ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಇತ್ತೀಚೆಗೆ ಮದುವೆ ಬೇಡ ಎಂದು ಕ್ಯಾನ್ಸಲ್ ಮಾಡಿದ್ದರು. ಇದರಿಂದ ಮನನೊಂದ ಯುವತಿ ಶುಕ್ರವಾರ ಕಚೇರಿಯಲ್ಲೇ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದಳು. ತಕ್ಷಣವೇ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.
ಈ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



