ಹೋಗಿ ಮೋದಿ, ಶಾ ಹತ್ತಿರ ಕೇಳು: ಕಷ್ಟ ಹೇಳಲು ಬಂದಿದ್ದ ಯುವ ರೈತನ ವಿರುದ್ಧ ಖರ್ಗೆ ಆಕ್ರೋಶ; Video
ಇಲ್ಲಿ ಬಂದು ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿ: ಅತಿವೃಷ್ಠಿಯಿಂದಾಗಿ ನಾನು ಬೆಳೆದಿದ್ದ ಬೆಳೆ ಹಾಳಾಗಿದೆ ಎಂದು ತನ್ನ ಕಷ್ಟವನ್ನು ಹೇಳಿಕೊಳ್ಳಲು ಬಂದಿದ್ದ ಯುವ ರೈತನ ವಿರುದ್ಧ ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ (Mallikarjun Kharge) ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಬಂದಿದ್ದ ಯುವಕ ಅತಿವೃಷ್ಠಿಯಿಂದ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ತೊರಗಿ ಬೆಳೆ ಹಾಳಾಗಿದೆ ಸರ್ ಎಂದು ಹೇಳಿದ್ದಾನೆ.
ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು, ಯುವಕನಿಗೆ ನೀನು ಎಷ್ಟು ಎಕರೆಯಲ್ಲಿ ಬೆಳೆ ಬೆಳೆದಿದ್ದೀಯಾ ಎಂದು ಪ್ರಶ್ನಿಸುತ್ತಾರೆ. ಅದಕ್ಕೆ ಯುವಕ ನಾಲ್ಕು ಎಕರೆಯಲ್ಲಿ ಬೆಳೆ ಬೆಳೆದಿದ್ದೆ ಎಂದು ಉತ್ತರಿಸಿದನು. ಇದಕ್ಕೆ ಖರ್ಗೆ ನನ್ನದು ನಲವತ್ತು ಎಕರೆಯಲ್ಲಿ ಬೆಳೆದಿದ್ದು ಹಾಳಾಗಿದೆ.
ತೊಗರಿ ಮಾತ್ರವಲ್ಲ, ಹೆಸರು, ಹತ್ತಿ, ಸೂರ್ಯಕಾಂತಿ ಸಹ ಹಾಳಾಗಿದೆ. ನಾನು ಯಾರಿಗೆ ಹೋಗಿ ಹೇಳಲಿ. ನೀನು ಬೇಕಿದ್ದರೆ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಅಮಿತ್ ಶಾ (Amit Shah) ಹತ್ತಿರ ಹೋಗಿ ಕೇಳು. ಇಲ್ಲಿ ಬಂದು ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



