ಬ್ಯಾಲಟ್ ಪೇಪರ್ ಬಳಕೆ: ಸಚಿವ ಸಂಪುಟ ಒಪ್ಪಿದರೆ ಸುಗ್ರೀವಾಜ್ಞೆ- ಎಚ್.ಕೆ ಪಾಟೀಲ್
ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡುವ ವಿಶ್ವಾಸವಿದೆ ಎಂದ ಅವರು, ಮತಪತ್ರ ಕಡ್ಡಾಯಗೊಳಿಸುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಆಗುವುದಿಲ್ಲ.

ಬೆಂಗಳೂರು: ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಯನ್ನು ಕಡ್ಡಾಯಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ಸ್ಥಳೀಯ ಚುನಾವಣೆಗಳಲ್ಲಿ ಮತಪತ್ರಗಳಿಗೆ ಬಳಕೆ ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದ ಬೆನ್ನಲ್ಲೇ ಪಾಟೀಲ್ ಈ ಹೇಳಿಕೆ ನೀಡಿದ್ದಾರೆ.
ಮಂಗಳವಾರ ಮಾತನಾಡಿದ ಅವರು, ಕಾಯ್ದೆಗಳ ತಿದ್ದುಪಡಿಗೆ ಕರಡು ಮಸೂದೆ ಸಿದ್ಧವಾಗಿದೆ. ಇದೇ 11ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಚರ್ಚೆ ಮಾಡುತ್ತೇವೆ ಎಂದರು. ಸಚಿವ ಸಂಪುಟ ಒಪ್ಪಿದರೆ ಸುಗ್ರೀವಾಜ್ಞೆ ಹೊರಡಿಸುತ್ತೇವೆ ಎಂದರು.
ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡುವ ವಿಶ್ವಾಸವಿದೆ ಎಂದ ಅವರು, ಮತಪತ್ರ ಕಡ್ಡಾಯಗೊಳಿಸುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಆಗುವುದಿಲ್ಲ. ಆ ಉದ್ದೇಶವೂ ಸರ್ಕಾರಕ್ಕೆ ಇಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



