ರಾಜ್ಯ

ಶಾಸಕ ಸತೀಶ್ ಸೈಲ್ ಬಂಧನ: 'ED ಕಾಂಗ್ರೆಸ್ ಶಾಸಕರನ್ನು ಮಾತ್ರ ಗುರಿಯಾಗಿಸಿಕೊಂಡಿದೆ'; ಡಿ.ಕೆ ಶಿವಕುಮಾರ್

ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಬೆಂಗಳೂರು ವಲಯ ಕಚೇರಿಯು ಶಾಸಕರನ್ನು ದಿನವಿಡೀ ವಿಚಾರಣೆ ನಡೆಸಿದ ನಂತರ ಬಂಧಿಸಿತು.

ಶಾಸಕ ಸತೀಶ್ ಸೈಲ್ ಬಂಧನ: 'ED ಕಾಂಗ್ರೆಸ್ ಶಾಸಕರನ್ನು ಮಾತ್ರ ಗುರಿಯಾಗಿಸಿಕೊಂಡಿದೆ'; ಡಿ.ಕೆ ಶಿವಕುಮಾರ್
ಡಿಕೆ ಶಿವಕುಮಾರ್
Published On :

ಬೆಂಗಳೂರು: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಶಾಸಕ ಸತೀಶ್ ಕೃಷ್ಣ ಸೈಲ್ ಬಂಧನದ ನಂತರ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯ (ED) ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಮಾತ್ರ ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಶಾಸಕ ಸತೀಶ್ ಸೈಲ್ ಬಂಧನವನ್ನು ಪ್ರಶ್ನಿಸಿದ ಅವರು, 'ಸತೀಶ್ ಸೈಲ್ ಅವರನ್ನು ಬಂಧಿಸುವ ಅಗತ್ಯ ಏನಿತ್ತು? ಅವರು ಕಾಂಗ್ರೆಸ್ ಶಾಸಕರನ್ನು ಮಾತ್ರ ಗುರಿಯಾಗಿಸಿಕೊಂಡಿದ್ದಾರೆ. ನಮ್ಮನ್ನು ಗುರಿಯಾಗಿಸಿಕೊಳ್ಳಲು ಅವರು ಬೇಕಾದ ಎಲ್ಲವನ್ನು ಮಾಡುತ್ತಿದ್ದಾರೆ' ಎಂದು ಹೇಳಿದರು.

ಕಬ್ಬಿಣದ ಅದಿರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ ನಂತರ ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.

ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಬೆಂಗಳೂರು ವಲಯ ಕಚೇರಿಯು ಶಾಸಕರನ್ನು ದಿನವಿಡೀ ವಿಚಾರಣೆ ನಡೆಸಿದ ನಂತರ ಬಂಧಿಸಿತು. ಆ ದಿನ ಮೊದಲು ಅವರು ಏಜೆನ್ಸಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ವಿಚಾರಣೆಗೆ ಹಾಜರಾಗುವ ಮೊದಲು ಸೈಲ್ ಅವರು ಹಲವು ಬಾರಿ ವಿಚಾರಣೆಗೆ ಗೈರಾಗಿದ್ದರು ಎಂದು ಈ ಬೆಳವಣಿಗೆ ಬಗ್ಗೆ ಮಾಹಿತಿ ಹೊಂದಿರುವ ಅಧಿಕಾರಿಗಳು ಎಎನ್‌ಐಗೆ ತಿಳಿಸಿದ್ದು, ಶಾಸಕರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.