ರಾಜ್ಯ

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಮತ್ತೊಂದು ರೈಲು ಸೇರ್ಪಡೆ: ಇಂದಿನಿಂದ ಸಂಚಾರ ಆರಂಭ

4ನೇ ರೈಲಿನ ಸಂಚಾರದೊಂದಿಗೆ ರೈಲುಗಳ ಸಂಚಾರದ ವೇಳಾಪಟ್ಟಿ ಬದಲಾವಣೆಯಾಗಿದ್ದು, ರೈಲುಗಳ ನಡುವಿನ ಅಂತರ 25 ನಿಮಿಷದಿಂದ 19 ನಿಮಿಷಕ್ಕೆ ಇಳಿಕೆಯಾಗಿದೆ.

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಮತ್ತೊಂದು ರೈಲು ಸೇರ್ಪಡೆ: ಇಂದಿನಿಂದ ಸಂಚಾರ ಆರಂಭ
ಹಳದಿ ಮಾರ್ಗ
Published On :

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಆರ್.ವಿ. ರಸ್ತೆ- ಬೊಮ್ಮಸಂದ್ರ ಮಾರ್ಗದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ನಾಲ್ಕನೇ ರೈಲು ಸಂಚಾರ ಬುಧವಾರದಿಂದ ಆರಂಭವಾಗಿದೆ.

4ನೇ ರೈಲಿನ ಸಂಚಾರದೊಂದಿಗೆ ರೈಲುಗಳ ಸಂಚಾರದ ವೇಳಾಪಟ್ಟಿ ಬದಲಾವಣೆಯಾಗಿದ್ದು, ರೈಲುಗಳ ನಡುವಿನ ಅಂತರ 25 ನಿಮಿಷದಿಂದ 19 ನಿಮಿಷಕ್ಕೆ ಇಳಿಕೆಯಾಗಿದೆ.

ಆಗಸ್ಟ್ 10 ರಿಂದ ಮೂರು ರೈಲುಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು. ಮೂರು ವಾರದ ಹಿಂದೆ ಕೊಲ್ಕತ್ತಾದ ತೀತಾಗಢ್ ರೈಲು ಫ್ಯಾಕ್ಟರಿಯಿಂದ ಈ ರೈಲು ಸೆಟ್ ಗಳು ಬೆಂಗಳೂರಿಗೆ ಬಂದು ಹೆಬ್ಬಗೋಡಿ ಡಿಪೋದಲ್ಲಿ ಜೋಡಣೆ ಮಾಡಲಾಗಿದೆ. ಕಳೆದ ವಾರದಿಂದ ರಾತ್ರಿ ರೈಲುಗಳ ಪ್ರಾಯೋಗಿಕ ಸಂಚಾರ ನಡೆಸಿ ಇದೀಗ ಪ್ರಯಾಣಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಹಳದಿ ಮಾರ್ಗದಲ್ಲಿ ಸೋಮವಾರದಿಂದ ಶನಿವಾರದವರೆಗೆ ಮೊದಲ ರೈಲಿನ ಸೇವೆ ಬೆಳಗ್ಗೆ 6 ಗಂಟೆಗೆ ಆರಂಭವಾಗಲಿದೆ. ಭಾನುವಾರ ಮೊದಲ ರೈಲು ಸೇವೆ ಬೆಳಗ್ಗೆ 7 ಗಂಟೆಗೆ ಶುರುವಾಗಲಿದೆ. ರಾತ್ರಿ ಕೊನೆಯ ರೈಲು ಸಮಯ ಎಂದಿನಂತೆ ಇರಲಿದ್ದು, ಆರ್.ವಿ. ರಸ್ತೆಯಿಂದ ರಾತ್ರಿ 11:55 ಕ್ಕೆ, ಬೊಮ್ಮಸಂದ್ರದಿಂದ ರಾತ್ರಿ 10:42ಕ್ಕೆ ಹೊರಡಲಿದೆ.

ಹಳದಿ ಮಾರ್ಗ ಆರಂಭವಾದ ದಿನದಿಂದ ಕೇವಲ 3 ರೈಲುಗಳು ಮಾತ್ರ ಸಂಚಾರ ನಡೆಸುತ್ತಿವೆ. ಪ್ರಯಾಣಿಕರಿಗೆ ಪ್ರತಿ 25 ನಿಮಿಷಕ್ಕೊಂದು ರೈಲು ಲಭ್ಯವಾಗುತ್ತಿತ್ತು. ಈ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಭಾರೀ ಹೆಚ್ಚಿದ್ದ ಕಾರಣ ದಟ್ಟಣೆ ಹೆಚ್ಚಿತ್ತು. ಸದ್ಯ ನಾಲ್ಕನೇ ರೈಲಿನ ಸೇರ್ಪಡೆಯಿಂದಾಗಿ ಒಂದು ರೈಲಿನಿಂದ ಮತ್ತೊಂದು ರೈಲಿನ ಅಂತರವು 19 ನಿಮಿಷಕ್ಕೆ ಇಳಿಕೆಯಾಗಿದೆ. ಇದರಿಂದ ಪ್ರಯಾಣಿಕರಿಗೆ ಕೊಂಚ ರಿಲೀಫ್‌ ಸಿಕ್ಕಂತಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.