ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ: ಹೈಕೋರ್ಟ್ ನಲ್ಲಿ ಮತ್ತೆ ಎರಡು PIL ಸಲ್ಲಿಕೆ
ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು ಅವರು ಕನ್ನಡಾಂಬೆ ಬಗ್ಗೆ ಈ ಹಿಂದೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಇನ್ನು ವಾರವಷ್ಟೇ ಬಾಕಿ ಉಳಿದಿದ್ದು, ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದರ ಬೆನ್ನಲ್ಲೇ ಹೈಕೋರ್ಟ್‌ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ.
ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು ಅವರು ಕನ್ನಡಾಂಬೆ ಬಗ್ಗೆ ಈ ಹಿಂದೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಹಿಂದೂ ಅಲ್ಲದ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ವಾಪಸ್ ಪಡೆಯಲು ಸರಕಾರಕ್ಕೆ ನಿರ್ದೇಶನ ನೀಡಬೇಕು. ಅದೇ ರೀತಿ ದಸರಾ ಉದ್ಘಾಟನೆಯು ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗವೆಂದು ಘೋಷಿಸಿ ಅದನ್ನು ಹಿಂದೂ ಗಣ್ಯರಿಂದ ಉದ್ಘಾಟಿಸಬೇಕು.
ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ ಹಿಂದೂ ಆಗಮಿಕ ಪದ್ಧತಿ ಪ್ರಕಾರವೇ ಕಟ್ಟುನಿಟ್ಟಾಗಿ ದಸರಾ ಉದ್ಘಾಟನೆ ನೆರವೇರಿಸಲು ನಿರ್ದೇಶನ ನೀಡಬೇಕು ಎಂದು ಬೆಂಗಳೂರಿನ ನಿವಾಸಿ ಎಚ್.ಎಸ್.ಗೌರವ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.
ಹಿಂದೂ ಸಂಘಟನೆಗಳು ಚಾಮುಂಡಿ ಚಲೋ ನಡೆಸಿದ್ದವು. ಮತ್ತೊಂದೆಡೆ, ದಲಿತ ಸಂಘಟನೆಗಳು ಬಾನು ಮುಷ್ತಾಕ್ ಬೆಂಬಲಿಸಿ ಹೋರಾಟ ಮಾಡಿದ್ದವು. ಇದೀಗ ಕಾನೂನು ಹೋರಾಟ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



