ಸ್ಲಂ ಬೋರ್ಡ್ ಅಡಿ 42,000 ಮನೆಗಳ ನಿರ್ಮಾಣ, ಮೂಲಸೌಲಭ್ಯ ಕಲ್ಪಿಸಲು ಸರ್ಕಾರದಿಂದ ಅನುದಾನ: ಸಿಎಂ
ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ.

ಬೆಂಗಳೂರು: ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯು ರಾಜ್ಯಾದ್ಯಂತ 42,000 ಮನೆಗಳನ್ನು ನಿರ್ಮಿಸುತ್ತಿದ್ದು, ಇಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಅನುದಾನ ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.
ಬುಧವಾರ ವಸತಿ ಇಲಾಖೆಯೊಂದಿಗೆ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ. ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ. 134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7,900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಬೇಕಿದೆ ಎಂದು ಹೇಳಿದರು.
ಸ್ಲಂ ಬೋರ್ಡ್ ಅಡಿ 42,000 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಅನುದಾನ ಒದಗಿಸಲಿದೆ. ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ)ಅಡಿ ರೂ.900 ಕೋಟಿ ಅನುದಾನ ಬಜೆಟ್ ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56,682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಹಂಚಿಕೆಗೆ ಪ್ರಸ್ತಾವನೆಗಳನ್ನು ಸಲ್ಲಿಸಿ, ಅನುಮೋದನೆ ಪಡೆದು, ಶೀಘ್ರ ಅವುಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



