ಮದ್ದೂರು ಗಣೇಶ ಮೆರವಣಿಗೆ ಕಲ್ಲು ತೂರಾಟ ಕೇಸ್: ASP ತಿಮ್ಮಯ್ಯ ವರ್ಗಾವಣೆ
ತಿಮ್ಮಯ್ಯ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಮಂಡ್ಯ: ಮದ್ದೂರು ಗಣೇಶ ಮೆರವಣಿಗೆಗೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಅಡಿಷನಲ್ ಎಸ್‌ಪಿ-1) ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ತಿಮ್ಮಯ್ಯ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಗೃಹ ಇಲಾಖೆ ವರ್ಗಾವಣೆ ಮಾಡಿ ಇನ್ನೂ ತಿಮ್ಮಯ್ಯ ಅವರಿಗೆ ಜಾಗ ತೋರಿಸಿಲ್ಲ. ನವೀನ್ ಕುಮಾರ್ ಅವರು ತಕ್ಷಣವೇ ಮಂಡ್ಯ ಜಿಲ್ಲೆಯ ಹೆಚ್ಚುವರಿ ಎಸ್‌ಪಿ-1 ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಮದ್ದೂರು ಪ್ರಕರಣದಲ್ಲಿ ತಿಮ್ಮಯ್ಯಗೆ ಹೆಚ್ಚುವರಿ ಜವಾಬ್ದಾರಿ ನೀಡಿಯೇ ಇರಲಿಲ್ಲ. ಹೀಗಿದ್ದರೂ ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಲ್ಲು ತೂರಾಟ ತಡೆಯಬೇಕಿದ್ದು ಮದ್ದೂರು ಇನ್‌ಸ್ಪೆಕ್ಟರ್ ಹಾಗೂ ಇತರ ಪೊಲೀಸರ ಕರ್ತವ್ಯವಾಗಿತ್ತು. ಸೋಮವಾರ ಪ್ರತಿಭಟನೆ ಬಂದೋಬಸ್ತ್ ನೇತೃತ್ವ ವಹಿಸಿದ್ದು ಎಸ್ಪಿ. ಹೀಗಿದ್ದರೂ ಸಹ ಅಮಾಯಕ ಅಧಿಕಾರಿಯನ್ನು ಸರ್ಕಾರ ಬಲಿಪಶು ಮಾಡಿದೆ ಎಂಬ ಮಾತುಗಳು ಕೇಳಿಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


