ಹಾಸನದಲ್ಲಿ ಐವರು ವಿದ್ಯಾರ್ಥಿಗಳು ಸೇರಿ 8 ಮಂದಿ ದುರ್ಮರಣ: ಚಾಲಕನ ಬಂಧನ; 5 ಲಕ್ಷ ಪರಿಹಾರ ಘೋಷಿಸಿದ ಸಿಎಂ, HDK ಸಂತಾಪ!
ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಅವರ ಪೈಕಿ 10 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಅವರ ಪೈಕಿ 10 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಇನ್ನು ಟ್ರಕ್ ಚಾಲಕ ಭುವನೇಶ್ ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಸ್ಥಳೀಯರು ಚಾಲಕನಿಗೂ ಹಿಗ್ಗಾಮುಗ್ಗ ಥಳಿಸಿದ್ದು ಭುವನೇಶ್ ಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಟ್ರಕ್ ಡಿಕ್ಕಿ ದುರಂತಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ಟ್ವೀಟಿಸಿದ್ದಾರೆ.
ಇನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಹ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ ಎಂದು ಕುಮಾರಸ್ವಾಮಿ ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



