ಭಾರೀ ಮಳೆಗೆ ನಗರದಲ್ಲಿ 16 ಮರಗಳು ಧರೆಗೆ: ಹಲವೆಡೆ ಸಂಚಾರ ಅಸ್ತವ್ಯಸ್ತ
ಕಾಮಾಕ್ಷಿಪಾಳ್ಯ ಬಸ್ ನಿಲ್ದಾಣದ ರಸ್ತೆಯಲ್ಲಿ ಮರ ಬಿದ್ದು ಸುಮನಹಳ್ಳಿ ಕಡೆಗೆ ಸಾಗುವ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಬೆಂಗಳೂರು: ಬುಧವಾರ ತಡರಾತ್ರಿ ನಗರದಲ್ಲಿ 52.8 ಮಿಮೀ ಮಳೆಯಾಗಿದ್ದು, ಭಾರೀ ಮಳೆಗೆ 16 ಮರಗಳು ಧರೆಗುರುಳಿ ಹಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಅರಣ್ಯ ವಿಭಾಗದಲ್ಲಿ 52 ದೂರುಗಳು ದಾಖಲಾಗಿದ್ದು, 36 ಮರದ ಕೊಂಬೆಗಳು ಧರೆಗುರುಳಿವೆ. ರಾಜಾಜಿನಗರದ 4ನ ಬ್ಲಾಕ್ ನಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು, ಪರಿಣಾಮ 5 ಕಾರುಗಳು, ಒಂಟು ಟಾಟಾ ಏಸ್ ಮತ್ತು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು 3 ದ್ವಿಚಕ್ರ ವಾಹನಗಳು, ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್'ನ್ನು ಹಾನಿಗೊಳಿಸಿದೆ ಎಂದು ತಿಳಿದುಬಂದಿದೆ.
ಕಾಮಾಕ್ಷಿಪಾಳ್ಯ ಬಸ್ ನಿಲ್ದಾಣದ ರಸ್ತೆಯಲ್ಲಿ ಮರ ಬಿದ್ದು ಸುಮನಹಳ್ಳಿ ಕಡೆಗೆ ಸಾಗುವ ಸಂಚಾರದ ಮೇಲೆ ಪರಿಣಾಮ ಬೀರಿತ್ತು.
ಕಸ್ತೂರಿನಗರ, ಹೆಬ್ಬಾಳ, ದೊಮ್ಮಲೂರಿನ ಬಳಿಯ ಎಸಿಎಸ್ ಸೆಂಟರ್, ವರ್ತೂರು-ಗುಂಜೂರು ರಸ್ತೆ, ಹೊರಮಾವು ಮತ್ತು ಹೆಬ್ಬಾಳ ಮುಂತಾದ ಹಲವಾರು ಪ್ರದೇಶಗಳಲ್ಲಿ, ರಸ್ತೆಗಳಲ್ಲಿ ನೀರು ನಿಂತ ಕಾರಣ ಸಂಚಾರ ನಿಧಾನವಾಗಿತ್ತು. ಇದಲ್ಲದೆ, ಅಂಡರ್‌ಪಾಸ್‌ಗಳಲ್ಲಿ ನೀರು ತುಂಬಿ ಸಂಚಾರ ದಟ್ಟಣೆ ಸಮಸ್ಯೆಗಳು ಕಂಡು ಬಂದಿತ್ತು. ತಗ್ಗು ಪ್ರದೇಶಗಳಲ್ಲಿನ ಕೆಲವು ಮನೆಗಳಿಗೂ ನೀರು ನುಗ್ಗಿ, ಜನರು ಸಮಸ್ಯೆ ಎದುರಿಸುವಂತಾಗಿತ್ತು.
ಹೊರಮಾವುವಿನ ಸಾಯಿ ಲೇಔಟ್‌ನಲ್ಲಿ ನೀರು ನಿಲ್ಲದಂತೆ ಮಾಡಲು ಆಯುಕ್ತ ಡಿ ಎಸ್ ರಮೇಶ್ ಅವರು 13.36 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಕಾರ್ಯಗಳನ್ನು ಪರಿಶೀಲಿಸಿದರು,
ಕಾಮಗಾರಿ ವೇಳೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಆಯುಕ್ತರು ನಿರ್ದೇಶಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



